ಗುಜರಾತ್ ನಲ್ಲಿ ಇತ್ತೀಚೆಗೆ ಕಾಂಗ್ರೆಸ್ ಗೆ ದೊಡ್ಡ ಶಾಕ್ ಎದುರಾಗಿತ್ತು. ಪಾಟೀದಾರ್ ಸಮುದಾಯದ ಸ್ಟ್ರಾಂಗ್ ಅಭ್ಯರ್ಥಿ ಹಾರ್ದಿಕ್ ಪಾಟೀಲ್ ಕಾಂಗ್ರೆಸ್ ಪಕ್ಷ ತೊರೆದರು. ಇದೀಗ ಅವರು ಬಿಜೆಪಿ ಸೇರಲಿದ್ದಾರೆ. ಅದಕ್ಕೆ ಈಗಾಗಲೇ ವೇದಿಕೆ ಸಿದ್ಧವಾಗಿದೆ ಎನ್ನಲಾಗಿದೆ.
ಜೂನ್ ಎರಡರಂದು ಹಾರ್ದಿಕ್ ಪಾಟೀಲ್ ಬಿಜೆಪಿ ಪಕ್ಷ ಸೇರಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. 2019 ರಿಂದ ಕಾಂಗ್ರೆಸ್ ನಲ್ಲಿದ್ದ ಹಾರ್ದಿಕ್ ಪಾಟೀಲ್ ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದರು. ಕಾಂಗ್ರೆಸ್ ಮೂಲ ಸಮಸ್ಯೆಗಳು ಹಾಗೂ ರಾಹುಲ್ ಗಾಂಧಿ ವಿರುದ್ಧ ನೇರವಾಗಿಯೇ ಅಸಮಾಧಾನ ಹೊರ ಹಾಕಿದ್ದರು.
ಈ ಸಂಬಂಧ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು, ಪಕ್ಷ ಬಿಡುತ್ತಿರುವುದಕ್ಕೆ ರಾಹುಲ್ ಗಾಂಧಿಯನ್ನೇ ಹೊಣೆ ಮಾಡಿದ್ದರು. ಇದೇ ವೇಳೆ ಬಿಜೆಪಿ ತಂದಿದ್ದ ಕಾಶ್ಮೀರದ 370 ಬಗ್ಗೆ, NCA ಬಗ್ಗೆ ಸೇರಿದಂತೆ ಹಲವು ಕಾರ್ಯಗಳನ್ನು ಹೊಗಳಿದ್ದರು. ಕಾಂಗ್ರೆಸ್ ಗೆ ರಾಜೀನಾಮೆ ಕೊಟ್ಟ ಬಳಿಕ ಬಿಜೆಪಿ ಪಕ್ಷ ಸೇರುತ್ತಿದ್ದಾರೆ. ಗುಜರಾತ್ ನಲ್ಲಿ ಪಾಟೀದಾರ್ ಸಮುದಾಯದ ಪ್ರಬಲ ನಾಯಕನೆಂದೆ ಗುರುತಿಸಿಕೊಂಡಿದ್ದಾರೆ. ಜೂನ್ ಎರಡರಂದು ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.