Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

6ನೇ ತರಗತಿಯಿಂದಲೇ ಓಬವ್ವ ಆತ್ಮರಕ್ಷಣೆ ಕಲೆ : ಕೋಟಾ ಶ್ರೀನಿವಾಸ ಪೂಜಾರಿ

Facebook
Twitter
Telegram
WhatsApp

6ನೇ ತರಗತಿಯಿಂದಲೇ ಓಬವ್ವ ಆತ್ಮರಕ್ಷಣೆ ಕಲೆ : ಕೋಟಾ ಶ್ರೀನಿವಾಸ ಪೂಜಾರಿ

ವಿದ್ಯಾರ್ಥಿನಿಯರಿಗಾಗಿ ಶಾಲೆಯಲ್ಲಿ ಓಬವ್ವ ಆತ್ಮರಕ್ಷಣೆ ಕಲೆ ತರಬೇತಿಯನ್ನು ನೀಡಲಾಗುತ್ತದೆ. ಆ ತರಬೇತಿಯನ್ನು ಈ ವರ್ಷ ಆರನೇ ತರಗತಿಯಿಂದಲೇ ಆರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಈ ತರಬೇತಿಯನ್ನು ಹಿಂದೆ ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿನಿಯರಿಗೆ ಮಾತ್ರ ನೀಡಲಾಗುತ್ತಿತ್ತು. ಈ ವರ್ಷದಿಂದ ಆರನೇ ತರಗತಿಯಿಂದಲೇ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ತರಬೇತಿ ನೀಡಲಾಗುತ್ತದೆ. ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನ 24 ಸಾವಿರ ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮ ರಕ್ಷಣೆ ಕಲೆ ತರಬೇತಿ ನೀಡಲಾಗುತ್ತಿದೆ. ಈ ಸಾಲಿನಲ್ಲಿ ಪ್ರಿ ಮೆಟ್ರಿಕ್‌ ವಿದ್ಯಾರ್ಥಿನಿಯರು ಸೇರಿ ಒಟ್ಟು 50 ಸಾವಿರ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲಾಗುವುದು. ಇದಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಖರ್ಚಾಗುತ್ತದೆ ಎಂದು ಹೇಳಿದರು.

ಕರ್ನಾಟಕ ವಸತಿ ಸಂಸ್ಥೆಯ 300 ಶಾಲೆಗಳಲ್ಲಿ ತಲಾ 100 ವಿದ್ಯಾರ್ಥಿನಿಯರಂತೆ ಒಟ್ಟು 30 ಸಾವಿರ ವಿದ್ಯಾರ್ಥಿನಿಯರು ಆತ್ಮ ರಕ್ಷಣಾ ಕಲೆ ತರಬೇತಿ ಪಡೆದಿದ್ದಾರೆ. ಈ ಸಾಲಿನಲ್ಲಿ ಹೆಚ್ಚುವರಿಯಾಗಿ 520 ವಸತಿ ಶಾಲೆಗಳ 82 ಸಾವಿರ ವಿದ್ಯಾರ್ಥಿನಿಯರು ತರಬೇತಿಗೆ ಒಳಪಡುತ್ತಾರೆ. ಒಟ್ಟು 1.15 ಲಕ್ಷ ವಿದ್ಯಾರ್ಥಿನಿಯರು ತರಬೇತಿ ಪಡೆಯಲಿದ್ದಾರೆ. ಇದರ ಅಂದಾಜು ವೆಚ್ಚ ₹17 ಕೋಟಿ ಆಗಲಿದೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!