Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಹಿಂದೂಗಳು ಯಾರು..? ಪಠ್ಯಪುಸ್ತಕದ ವಿಚಾರಕ್ಕೆ ಸಚಿವರನ್ನು ಪ್ರಶ್ನಿಸಿದ ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಯಾದಾಗಿನಿಂದ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದೇ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ @BCNagesh_bjp ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಸನ್ಮಾನ್ಯ ಸಚಿವರು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು.

‘ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ, ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ’ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ.

ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲವಲ್ಲಾ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ.

ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿತೋರಿಸಿದ್ದಕ್ಕಾಗಿ ಮಾಡಲಾಯಿತೇ? ಹಾಗೆಂದು ಹೇಳಿಬಿಡಿ.

ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ.

ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರುವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ಸಾಲು ಸಾಲು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

ಚಿತ್ರದುರ್ಗ | ನಗರಸಭೆಯಿಂದ ಮದ್ಯದಂಗಡಿಗಳ ಮೇಲೆ ದಾಳಿ :  ನಿಷೇಧಿತ ಪ್ಲಾಸ್ಟಿಕ್ ಲೋಟಗಳ ವಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ನಗರದ ಅನೇಕ ಬಾರ್ ಗಳ ಮೇಲೆ ನಗರಸಭೆಯವರು ದಾಳಿ ನಡೆಸಿ ಪ್ಲಾಸ್ಟಿಕ್

error: Content is protected !!