Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು : ಛಲವಾದಿ ನಾರಾಯಣಸ್ವಾಮಿ ಬಗ್ಗೆ ಸಿದ್ದರಾಮಯ್ಯ ಟ್ವೀಟ್

Facebook
Twitter
Telegram
WhatsApp

ಬೆಂಗಳೂರು: ಆರ್ ಎಸ್ ಎಸ್ ಚಡ್ಡಿ ಸುಡುವ ಸಿದ್ದರಾಮಯ್ಯ ಅವರ ಮಾತಿಗೆ ಇಂದು ಛಲವಾದಿ ನಾರಾಯಣಾ್ವಾಮಿ ಅವರು, ಚಡ್ಡುಗಳು ಹೊತ್ತು ಸಿದ್ದರಾಮಯ್ಯ ಅವರ ನಿವಾಸಕ್ಕೆ ಬಂದಿದ್ದರು. ಈ ಸಂಬಂಧ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ಬೇಸರ ಹೊರ ಹಾಕಿದ್ದಾರೆ. ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ‌ ಜಾತಿಗಳು ಯಾಕೆ ಇಲ್ಲ? ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು @BJP4Karnataka ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ. ಈ‌ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ.

ಛಲವಾದಿ ನಾರಾಯಣ ಸ್ವಾಮಿಯವರೇ, ಸ್ವಾಭಿಮಾನವನ್ನು‌ ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ‌ನಿಮಗೆ‌ ನಾನು ನೀಡುವ ಸಲಹೆ.

ಛಲವಾದಿ ನಾರಾಯಣ ಸ್ವಾಮಿಯವರೇ, ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ.

ಛಲವಾದಿ ನಾರಾಯಣ ಸ್ವಾಮಿಯವರೇ, ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು. ನಿಮ್ಮನ್ನು ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆಯಂತಹ ಸ್ಥಾನದಲ್ಲಿ‌‌ ಕಾಣುವ ಆಸೆ ನನಗೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!