ಲಕ್ನೋ: ನೂಪೂರ್ ಶರ್ಮಾ ನೀಡಿದ್ದ ಪೈಗಂಬರ ವಿರುದ್ಧದ ಹೇಳಿಕೆ ಸಂಬಂಧ ಇಂದು ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಅದರಲ್ಲೂ ಉತ್ತರ ಪ್ರದೇಶದಲ್ಲಿ ಎಲ್ಲಾ ಕಡೆಯಲ್ಲೂ ಜೋರು ಪ್ರತಿಭಟನೆ ನಡೆಸಿದ್ದಾರೆ. ಯುಪಿಯಲ್ಲಿ ನಡೆದ ಹಿಂಸಾಚಾರವನ್ನು ಯೋಗಿ ಆದಿತ್ಯನಾಥ್ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ತಪ್ಪು ಮಾಡಿದವರ ಅಕ್ರಮ ಆಸ್ತಿಗೆ ಬುಲ್ಡೋಜರ್ ನುಗ್ಗಿವೆ.
ಕಲ್ಲು ತೂರಾಟ ನಡೆದ ಅಟಲ್ ಚೌಕ್ ಸುತ್ತಮುತ್ತಲಿನ ಪ್ರದೇಶಗಳಿಗೆ ಬುಲ್ಡೋಜರ್ ಗಳ ಎಂಟ್ರಿಯಾಗಿದೆ. ದುಷ್ಕರ್ಮಿಗಳನ್ನು ಪತ್ತೆ ಹಚ್ಚಿದ ಬಳಿಕ, ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಕಳೆದ ಶನಿವಾರ ಕಾನ್ಪುರದಲ್ಲಿ ನಡೆದ ಹಿಂಸಾಚಾರದ ಬಳಿಕ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಈ ತೀರ್ಮಾನ ತೆಗೆದುಕೊಂಡಿದ್ದಾರೆ.
ಇಲ್ಲಿನ ಕಾನ್ಪುರ, ಪ್ರಯಾಗ್ ರಾಜ್, ಲಕ್ನೋ, ಮುರದಾಬಾದ್, ಸಹರಾನ್ಪುರ, ಫಿರೋಜಾ ಬಾದ್ ನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು. ಜೊತೆಗೆ ಕಲ್ಲು ತೂರಾಟ ಮಾಡಿದ್ದಾರೆ, ಸಿಕ್ಕ ಸಿಕ್ಕ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಹಲವರಿಗೆ ಘಟನೆಯಿಂದ ಗಾಯಗಳು ಆಗಿದೆ. ಈ ಸಂಬಂಧ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.