Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯೋಗ ಸರ್ವ ರೋಗಗಳಿಗೂ ರಾಮಭಾಣ : ಶ್ರೀನಿವಾಸ್

Facebook
Twitter
Telegram
WhatsApp

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ : ಆಧುನಿಕ ಜೀವನದಲ್ಲಿ ಎಲ್ಲರೂ ಹಣದ ಹಿಂದೆ ಓಡಿದರೆ ಆರೋಗ್ಯವನ್ನು ಹಾಳು ಮಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ಪ್ರತಿಯೊಬ್ಬರು ಯೋಗ, ಧ್ಯಾನ ಮಾಡುವುದರಿಂದ ಮನಸ್ಸಿಗೆ ಶಾಂತಿ ದೊರಕುತ್ತದೆಯಲ್ಲದೆ ರೋಗದಿಂದ ದೂರವಿರಬಹುದು ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದರು.

ಕೋಟೆ ಮುಂಭಾಗವಿರುವ ರಾಘವೇಂದ್ರ ನರ್ಸಿಂಗ್ ಕಾಲೇಜಿನಲ್ಲಿ ಪತಂಜಲಿ ಯೋಗ ಸಮಿತಿಯಿಂದ ಹಮ್ಮಿಕೊಂಡಿರುವ ಯೋಗಾಸನದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರಮೋದಿರವರು ಯೋಗಕ್ಕೆ ಹೆಚ್ಚಿನ ಮಹತ್ವ ನೀಡಿದ್ದರಿಂದ ಜೂ.21 ನ್ನು ವಿಶ್ವಯೋಗ ದಿನವನ್ನಾಗಿ ಘೋಷಿಸಲಾಗಿದೆ. ಸರ್ವ ರೋಗಗಳಿಗೂ ಯೋಗ ರಾಮಭಾಣವಾಗಿರುವುದರಿಂದ ಎಲ್ಲರೂ ದಿನಕ್ಕೆ ಅರ್ಧ ಗಂಟೆಯಾದರೂ ಯೋಗಕ್ಕೆ ಸಮಯ ಮೀಸಲಿಟ್ಟರೆ ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್.ಸತ್ಯಣ್ಣ ಮಾತನಾಡಿ ರಾಮಾಯಣ, ಮಹಾಭಾರತ ಕಾಲದಿಂದಲೂ ಯೋಗವಿದೆ. ಋಷಿಮುನಿಗಳು ಯೋಗಭ್ಯಾಸ ಮಾಡುತ್ತಿದ್ದರು. ಹಿಂದಿನ ಕಾಲದಲ್ಲಿ ಎಲ್ಲರೂ ಶ್ರಮಜೀವಿಗಳಾಗಿದ್ದರು. ತಾಂತ್ರಿಕ ಜೀವನಕ್ಕೆ ಈಗ ಮನುಷ್ಯ ಮಾರು ಹೋಗಿರುವುದರಿಂದ ನಾನಾ ರೀತಿಯ ರೋಗಗಳಿಗೆ ತುತ್ತಾಗುತ್ತಿದ್ದಾನೆ. ಒಂದು ಕಾಲದಲ್ಲಿ ಮಹಿಳೆಯರು ಕುಟ್ಟುವುದು, ಬೀಸುವುದರಿಂದ ಲವಲವಿಕೆಯಿಂದ ಇರುತ್ತಿದ್ದರು. ಈಗ ಮಿಕ್ಸಿ, ಕುಕ್ಕರ್, ಗ್ರೈಂಡರ್, ವಾಷಿಂಗ್ ಮೆಷಿನ್‍ಗೆ ಅವಲಂಭಿಸಿರುವುದರಿಂದ ಅನೇಕ ವ್ಯಾದಿ ಕಾಡುತ್ತಿದೆ. ಅದಕ್ಕಾಗಿ ಯೋಗ ಮಾಡಿ ರೋಗದಿಂದ ದೂರವಿರಿ ಎಂದು ಮನವಿ ಮಾಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಡಿ.ಡಿ.ಪಿ.ಐ. ನಾಗರಾಜ್ ಮಾತನಾಡುತ್ತ ಒತ್ತಡದ ಬದುಕಿನಲ್ಲಿ ಯೋಗ ಬಹಳ ಮುಖ್ಯವಾದುದು. ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಬಹಳ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಪ್ರತಿದಿನ ಐದತ್ತು ನಿಮಿಷವಾದರೂ ಯೋಗ ಮಾಡಿದರೆ ದೇಹ ಮತ್ತು ಮನಸ್ಸು ಉಲ್ಲಾಸದಿಂದ ಇರುತ್ತದೆ. ಈಗಿನ ಜೀವನ ಶೈಲಿ ಮತ್ತು ಬಳಸುವ ಆಹಾರ ಪದಾರ್ಥಗಳಿಂದ ಎಲ್ಲರೂ ಒಂದಲ್ಲ ಒಂದು ರೀತಿಯ ನೋವು ಅನುಭವಿಸುವಂತಾಗಿದೆ. ಹಾಗಾಗಿ ಯೋಗಕ್ಕೆ ಹೆಚ್ಚಿನ ಮಹತ್ವ ಕೊಡುವಂತೆ ತಿಳಿಸಿದರು.
ಕೂಬಾನಾಯ್ಕ, ನಿವೃತ್ತ .ಎ.ಎಸ್.ಐ. ಗುರುಮೂರ್ತಿ, ಉಪನ್ಯಾಸಕ ಚನ್ನಬಸಪ್ಪ, ಯೋಗ ಗುರು ಕೆಂಚವೀರಪ್ಪ ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!