ಚಿತ್ರದುರ್ಗ,(ಜೂ.19) : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಇದೇ ಜೂನ್ 20 ರಂದು ಮಧ್ಯಾಹ್ನ 3.30 ಕ್ಕೆ ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ, ಹೊಸದುರ್ಗ ಹಾಗೂ ಭರಮಸಾಗರ ಸರ್ಕಾರಿ ಐಟಿಐ ಕಾಲೇಜುಗಳನ್ನು ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಿಸಲಾಗಿರುವ ಐಟಿಐ ಕಾಲೇಜಿನ ಕಟ್ಟಡದ ಲೋಕಾರ್ಪಣೆ ಸಮಾರಂಭ ನಡೆಯಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ನೆರವೇರಿಸುವರು. ರಾಜ್ಯಪಾಲ ಥಾವರ್ ಚಂದ್ರಶೇಖರ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿವಹಿಸುವರು.
ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಸಚಿವ ಬಿ.ಶ್ರೀರಾಮುಲು, ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣ ಸ್ವಾಮಿ ಉಪಸ್ಥಿತಿವಹಿಸುವರು.
ಉನ್ನತಿ ಕರಿಸಿದ ಐಟಿಐ ಕೇಂದ್ರಗಳು ಬರುವ ಆಯಾ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಟಿ.ರಘುಮೂರ್ತಿ, ಗೂಳಿಹಟ್ಟಿ ಡಿ.ಶೇಖರ್, ಎಂ.ಚಂದ್ರಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ, ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್, ಹಿರಿಯೂರಿನ ಮೇಟಿಕುರ್ಕೆ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಅನುಸೂಯಮ್ಮ, ಚಳ್ಳಕೆರೆ ನಗರಸಭೆ ಅಧ್ಯಕ್ಷೆ ಸುಮಕ್ಕ ಆಂಜನೇಯ, ಹೊಸದುರ್ಗದ ಹುಣವಿನಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಬಿ.ಕುಬೇರಪ್ಪ, ಭರಮಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ತಾಜ್ ಬಿ ರಜಾಕ್ ಸಾಬ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.