ನಟ ದಿಗಂತ್ ಗೆ ಗೋವಾದಲ್ಲಿ ಅಪಘಾತ ಸಂಭವಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದ್ದು, ಈಗ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಫ್ಯಾಮಿಲಿ ಮತ್ತು ಸ್ನೇಹಿತರ ಜೊತೆ ಟ್ರಿಪ್ ಹೋಗಿದ್ದಾಗ ಈ ಘಟನೆ ನಡೆದಿದೆ.
ನಟ ದಿಗಂತ್ ಗೋವಾ ಬೀಚ್ ನಲ್ಲಿ ಸಮ್ಮರ್ ಸಾಲ್ಟ್ ಹೊಡೆಯುವಾಗ ಆಯತಪ್ಪಿ ಬಿದ್ದಿದ್ದಾರೆ. ಈ ವೇಳೆ ಕುತ್ತಿಗೆಗೆ ತುಂಬಾ ಪೆಟ್ಟು ಬಿದ್ದಿದ್ದು, ಗೋವಾದಲ್ಲಿಯೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಏರ್ ಲಿಫ್ಟ್ ಮೂಲಕ ದಿಗಂತ್ ರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. ಬೆನ್ನುಮೂಳೆ ಮತ್ತು ಕಾಲು ಮೂಳೆ ಸಮಸ್ಯೆಯಾಗಿದ್ದು, ಇಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಈಗಾಗಲೇ ಮಣಿಪಾಲ್ ಆಸ್ಪತ್ರೆಯ ವೈದ್ಯರು ಚಿಕಿತ್ಸೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.