ಮೈಸೂರು: ಮೈಸೂರಿನಲ್ಲಿ ಯೋಗ ಕಾರ್ಯಕ್ರಮದ ಯಶಸ್ಸು ಹಿನ್ನೆಲೆ, ಜಿಲ್ಲಾ ಉಸ್ತುವಾರಿ ಸಚಿವರು ಎಸ್ ಟಿ ಸೋಮಶೇಖರ್ ರಿಂದ ಕೃತಜ್ಞತೆ ಸಲ್ಲಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜನಪ್ರತಿನಿಧಿಗಳು, ಪೊಲೀಸ್ ಇಲಾಖೆ, ಪಾಲಿಕೆ ಸಿಬ್ಬಂದಿ, ಜಿಲ್ಲಾಡಳಿತಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಗೆ ಹೂಗುಚ್ಛ ನೀಡಿ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ. ವಿಶೇಷವಾಗಿ ಮೈಸೂರಿನ ಜನತೆಗೆ ಅಭಿನಂದನೆ ಸಲ್ಲಿಸಬೇಕು. ಭದ್ರತೆಯ ದೃಷ್ಟಿಯಿಂದ ರಸ್ತೆಗಳನ್ನ ಕೆಲವೆಡೆ ಬಂದ್ ಮಾಡಲಾಗಿತ್ತು. ಈ ನಡುವೆಯೂ ಮೈಸೂರಿನ ಜನತೆ ಸಹಕಾರ ನೀಡಿದ್ದಾರೆ. ಮುಖ್ಯಮಂತ್ರಿಗಳಿಂದಲೂ ಎಲ್ಲಾ ರೀತಿಯ ಸಹಕಾರ ದೊರೆತಿದೆ. ಒಟ್ಟಾರೆ ಕಾರ್ಯಕ್ರಮವು ಸುಮಾರು 25 ಕೋಟಿ ರೂಪಾಯಿ ವೆಚ್ಚದಲ್ಲಿ ಜರುಗಿದೆ ಎಂದಿದ್ದಾರೆ.
ಇನ್ನು ಆಷಾಢ ಮಾಸ ಶುರುವಾಗುತ್ತಿದ್ದು, ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಹಿನ್ನಲೆಯಲ್ಲಿ ಬೆಟ್ಟಕ್ಕೆ ಸಾಕಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಬೆಟ್ಟಕ್ಕೆ ಬರುವ ಭಕ್ತರಿಗೆ ಎರಡು ಡೋಸ್ ಕಡ್ಡಾಯ. ಎರಡು ಡೋಸ್ ಲಸಿಕೆ ಪಡೆದಿರಬೇಕು. ಇಲ್ಲದಿದ್ದರೆ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರಲೇಬೇಕೆಂದು ಉಸ್ತುವಾರಿ ಸಚಿವ ಎಸ್ .ಟಿ.ಸೋಮಶೇಖರ್ ಹೇಳಿದ್ದಾರೆ.