ನವದೆಹಲಿ : ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು (64) ಅವರಿಗೆ ಕೇಂದ್ರ ಸರ್ಕಾರ ಝಡ್ ಪ್ಲಸ್ ಕೆಟಗರಿ ಭದ್ರತೆಯನ್ನು ಒದಗಿಸಿದೆ.
ಅವರಿಗೆ ಸಿಆರ್‌ಪಿಎಫ್ ಕಮಾಂಡೋಗಳು ‘ಝಡ್ ಪ್ಲಸ್’ ಭದ್ರತೆ ಒದಗಿಸಿದ್ದಾರೆ ಎಂದು ಕೇಂದ್ರ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಝಡ್-ಪ್ಲಸ್ ರಕ್ಷಣೆಯು ಕೇಂದ್ರ ಸರ್ಕಾರವು ಒದಗಿಸುವ ಎರಡನೇ ಅತ್ಯುನ್ನತ ಮಟ್ಟದ ಭದ್ರತೆಯಾಗಿದೆ.
ಜೂನ್ 24 ರಂದು ನಾಮಪತ್ರ
ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಜೂನ್ 24 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಲಾಗಿದೆ.