Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲಾಗುವುದು ; ಸಲೀಂ ಅಹಮದ್

Facebook
Twitter
Telegram
WhatsApp

ಚಿತ್ರದುರ್ಗ : ಸಂಘಟನೆ, ಬೂತ್ ಕಮಿಟಿಗಳ ರಚನೆಗೆ ಒತ್ತು ನೀಡುವ ಮೂಲಕ ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲಾಗುವುದೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದರು.

ದಾವಣಗೆರೆ ರಸ್ತೆಯಲ್ಲಿರುವ ಎನ್.ಬಿ.ಟಿ.ಹಾಲ್‍ನಲ್ಲಿ ಶುಕ್ರವಾರ ನಡೆದ ನವಸಂಲ್ಪ ಶಿಬಿರ ಉದ್ಘಾಟಿಸಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜೊತೆ ನಾಲ್ಕು ಗಂಟೆಗಳ ಕಾಲ ಚರ್ಚಿಸಿ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಲೀಂ ಅಹಮದ್‍ರವರು ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಮಾಜಿ ಶಾಸಕರುಗಳು ಶಿಬಿರದಲ್ಲಿ ಭಾಗವಹಿಸಿದ್ದರು.

2023 ರಲ್ಲಿ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಆರಕ್ಕೆ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಸಂಕಲ್ಪ ಮಾಡಲಾಯಿತು. ಶಿಬಿರದಲ್ಲಿ ನಾಲ್ಕು ಸಮಿತಿಗಳನ್ನು ರಚಿಸಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚಿಸಲಾಯಿತು ಎಂದು ಹೇಳಿದರು.

ಶಿಬಿರದ ವರದಿಯನ್ನು ಕೆ.ಪಿ.ಸಿ.ಸಿ.ಗೆ ಸಲ್ಲಿಸಿ ಪಕ್ಷ ಸಂಘಟನೆ ಕುರಿತು ಪ್ರಸ್ತಾಪಿಸಲಾಗುವುದು. ಮಹಿಳೆಯರು, ಯುವಕರು ಎಲ್ಲಾ ವರ್ಗದವರು ಬೂತ್‍ನಲ್ಲಿರಬೇಕು. ಎಲ್ಲಾ ಕಮಿಟಿಗಳನ್ನು ರಚನೆ ಮಾಡುತ್ತೇವೆ. ಕಾಂಗ್ರೆಸ್ ಪಕ್ಷದ ಇತಿಹಾಸ, ಹೋರಾಟ, ಜನಪರ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಿಳಿಸಲಾಗುವುದು. ಅದೇ ರೀತಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಭ್ರಷ್ಟಾಚಾರ, ನಲವತ್ತು ಪರ್ಸೆಂಟ್ ಕಮಿಷನ್ ಹಗರಣವನ್ನು ಮತದಾರರಿಗೆ ಮನವರಿಕೆ ಮಾಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದೆ ತರುತ್ತೇವೆ.

ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇದ್ಯಾವುದರ ಪರಿವೆ ಇಲ್ಲದ ಬಿಜೆಪಿ.ಭ್ರಷ್ಟಾಚಾರದಲ್ಲಿ ಮುಳುಗಿದೆ. ದೇಶದ ಪ್ರಧಾನಿ ಮೋದಿ ಅಪ್ಪಟ ಸುಳ್ಳುಗಾರ. 2014 ಪಾರ್ಲಿಮೆಂಟ್ ಚುನಾವಣಾ ಪೂರ್ವದಲ್ಲಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುತ್ತೇನೆ. ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಬಡವರ ಬ್ಯಾಂಕ್ ಖಾತೆಗಳಿಗೆ ಹದಿನೈದು ಲಕ್ಷ ರೂ.ಜಮಾ ಮಾಡುವುದಾಗಿ ನಂಬಿಸಿ ಯಾವುದನ್ನು ಈಡೇರಿಸಿಲ್ಲ.

ಬೆಳಗಾವಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ನಲವತ್ತು ಪರ್ಸೆಂಟ್ ಕಮಿಷನ್ ಅಕ್ರಮದ ವಿರುದ್ದ ನೇರವಾಗಿ ಮೋದಿಗೆ ಪತ್ರ ಬರೆದು ನಂತರ ಆತ್ಮಹತ್ಯೆ ಮಾಡಿಕೊಂಡರು. ಇವರ ಸಾವಿಗೆ ಕಾರಣವಾಗಿರುವ ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ವಿನಃ ಬಂಧಿಸಿ ಸಿ.ಬಿ.ಐ. ಇ.ಡಿ. ಐ.ಡಿ. ಯಾವ ತನಿಖೆಯನ್ನು ನಡೆಸಲಿಲ್ಲ. ಕೇವಲ ಅಧಿಕಾರಕ್ಕಾಗಿ ಕಚ್ಚಾಡುತ್ತಿದ್ದಾರೆ.

ಇವೆಲ್ಲಾ ವಿಚಾರಗಳನ್ನಿಟ್ಟುಕೊಂಡು ಹೋರಾಟದ ಮೂಲಕ ಜನರ ಬಳಿ ಹೋಗಿ ಬಿಜೆಪಿ.ಯ ಅಕ್ರಮವನ್ನು ತಿಳಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ ಎಂದರು.

ಮಧ್ಯಪ್ರದೇಶ, ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಸಿದ ಬಿಜೆಪಿ.ಈಗ ಮಹಾರಾಷ್ಟದಲ್ಲೂ ಆಪರೇಷನ್ ಮಾಡಿ ಮುಖ್ಯಮಂತ್ರಿಗಳನ್ನೆ ಬದಲಾಯಿಸಿದೆ.

ರಾಹುಲ್‍ಗಾಂಧಿಯನ್ನು ವಿನಾ ಕಾರಣ ವಿಚಾರಣೆ ನಡೆಸುತ್ತಿರುವುದನ್ನು ನೋಡಿದರೆ ಕೇಂದ್ರ ಸರ್ಕಾರ ಸಿ.ಬಿ.ಐ. ಇ.ಡಿ. ಐ.ಡಿ. ಎಲ್ಲವನ್ನು ದುರಪಯೋಗಪಡಿಸಿಕೊಳ್ಳುತ್ತಿದೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ.ಸರ್ಕಾರದಿಂದ ಯಾವುದೇ ಅಭಿವೃದ್ದಿಯಾಗಿಲ್ಲ.

ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಜನಸಾಮಾನ್ಯರು ಪರದಾಡುವಂತಾಗಿದೆ. ಹಾಗಾಗಿ ನವಸಂಕಲ್ಪ ಶಿಬಿರದಲ್ಲಿ ಬಿಜೆಪಿ.ವಿರುದ್ದ ಹೋರಾಡುವ ಸಂಕಲ್ಪ ಮಾಡಲಾಯಿತು ಎಂದು ತಿಳಿಸಿದರು.

ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಸಕ ಟಿ.ರಘುಮೂರ್ತಿ, ಮಾಜಿ ಶಾಸಕರುಗಳಾದ ಎ.ವಿ.ಉಮಾಪತಿ, ತಿಪ್ಪೇಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯೆ ಜಯಮ್ಮ ಬಾಲರಾಜ್, ಆರ್.ಮಂಜುನಾಥ್, ಮುರಳಿಧರ ಹಾಲಪ್ಪ, ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಮಹಿಳಾಧ್ಯಕ್ಷೆ ಶ್ರೀಮತಿ ಗೀತನಂದಿನಿಗೌಡ ಇನ್ನು ಮೊದಲಾದವರು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!