ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ *“ಪ್ರತಿಭಾ ಪುರಸ್ಕಾರ”* ವನ್ನು ಆಯೋಜಿಸುತ್ತಾ ಬಂದಿದ್ದು, 2022ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರದ ಖಾಯಂ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಕೇಂದ್ರ ಸಂಘದಿಂದ Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Online link: https: //bit.ly/ksgeaprathibapuraskara2022
Online ಮೂಲಕ ಅರ್ಜಿ ಸಲ್ಲಿಸಲು ಅರ್ಜಿದಾರರ ತಂದೆ-ತಾಯಿ/ ಪೋಷಕರು ಕಡ್ಡಾಯವಾಗಿ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕಾಗಿದ್ದು, ವೇತನ ಬಟವಾಡೆ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ ತಾಲ್ಲೂಕು/ ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ಸೇವಾ ದೃಢೀಕರಣ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸುವುದು.
ವಿದ್ಯಾರ್ಥಿಯ ಪೋಷಕರು ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಯ ನೌಕರರಾಗಿದ್ದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ.
ಜಿಲ್ಲಾಧ್ಯಕ್ಷರು ಮತ್ತು ತಾಲ್ಲೂಕು ಅಧ್ಯಕ್ಷರಿಂದ ಸೇವಾ ದೃಢೀಕರಣ ಪತ್ರವಿಲ್ಲದೆ ಸಲ್ಲಿಸಲ್ಪಡುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ *ದಿನಾಂಕ: 15/07/2022
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22354783/84, 9902135813 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.