ಕಲಬುರಗಿ: ರಾಜ್ಯದಲ್ಲೆಡೆ ಮುಂಗಾರು ಆರಂಭ ಜೋರಾಗಿದೆ. ರಾಜ್ಯದ ಹಲವು ಜಿಲ್ಲೆಯಲ್ಲಿ ಬೆಂಬಿಡದೆ ಮಳೆ ಸುರಿಯುತ್ತಲೆ ಇದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮತ್ತೊಂದು ಕಡೆ ಕೃಷಿದಾಯಕ ಕೆಲಸಗಳು ಗರಿಗೆದರಿವೆ. ಈ ಮಧ್ಯೆ ಆರಂಭದ ಮಳೆಗೆ ಆರಂಭದಲ್ಲಿಯೇ ಒಂದು ಬಲಿಯಾಗಿದೆ.
ಮಳೆಯ ಆರ್ಭಟಕ್ಕೆ ಜಿಲ್ಲೆ ಚಿತ್ತಾಪೂರ ಪಟ್ಟಣದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಮನೆಯ ಗೋಡೆ ಕುಸಿದಿದೆ. ಇದರ ಪರಿಣಾಮ ಮನೆಯೊಳಗಿದ್ದ 60 ವರ್ಷದ ಆರೀಫಾ ಬೇಗಂ ಸಾವನ್ನಪ್ಪಿದ್ದಾರೆ. ಜೊತೆಯಲ್ಲಿಯೆ ಇದ್ದ ಮಗಳು ಮತ್ತು ಗಂಡನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಳೆಯಿಂದಾಗಿ ಸಂಪರ್ಕ ಕಲ್ಪಿಸುವ ರಸ್ತೆಗಳೆಲ್ಲಾ ಮುಚ್ಚಿ ಹೋಗಿವೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಅಷ್ಟೇ ಅಲ್ಲ ಜೋರಾದ ಮಳೆಯಿಂದಾಗಿ ಜಿಲ್ಲೆಯಲ್ಲಿ ಈಗಾಗಲೇ ಶಾಲಾ ಕಾಲೇಜುಗಳಿಗೆ ಒಂದು ದಿನ ರಜೆನೀಡಲಾಗಿದೆ. ಇನ್ನು ಎರಡು ದಿನಗಳ ಕಾಲ ಇದೆ ರೀತಿ ಮಳೆಯಾಗುತ್ತೆ ಎಂಬ ಸೂಚನೆಯನ್ನು ಹವಮಾನ ಇಲಾಖೆ ನೀಡಿರುವುದಲ್ಲದೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ.