Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೀವನದಲ್ಲಿ ತಪ್ಪುಗಳನ್ನು ತಿದ್ದಿ ತೀಡಿ ಸರಿಯಾದ ದಾರಿಗೆ ಕರೆದುಕೊಂಡು ಹೋಗುವವರೆ ನಿಜವಾದ ಗುರುಗಳು :  ಟಿ.ಬದರಿನಾಥ್

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ: ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳುವವರಷ್ಟೆ ಗುರುಗಳಲ್ಲ. ಜೀವನದ ವಿವಿಧ ಹಂತಗಳಲ್ಲಿ ತಪ್ಪುಗಳನ್ನು ತಿದ್ದಿ ತೀಡಿ ಸರಿಯಾದ ದಾರಿಗೆ ಕರೆದುಕೊಂಡು ಹೋಗುವವರೆ ನಿಜವಾದ ಗುರುಗಳು ಎಂದು ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದರಿನಾಥ್ ಹೇಳಿದರು.

ವಾಸವಿ ವಿದ್ಯಾಸಂಸ್ಥೆ ಹಾಗೂ ವಾಸವಿ ಮಹಿಳಾ ಸಂಘದಿಂದ ವಾಸವಿ ಶಾಲೆಯಲ್ಲಿ ಬುಧವಾರ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಜ್ಞಾನ, ಬುದ್ದಿ, ಆದರ್ಶಕ್ಕೆ ವಯಸ್ಸಿನ ಮಿತಿಯಿಲ್ಲ. ಮನಸ್ಸು ಕೈಯಲ್ಲಿದ್ದರೆ ಮಾತ್ರ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು. ದೇಶದಲ್ಲಿ ನೆರೆ ಹಾವಳಿ ಹೆಚ್ಚಾಗಿದ್ದು, ಕೆಲವು ಕಡೆ ಊರಿಗೆ ಊರೆ ಮುಳುಗಿ ಹೋಗಿದೆ.

ಇಂತಹ ಸಂಕಷ್ಟದ ಸಂದರ್ಭದಲ್ಲಿ ನೆರವಿಗೆ ಧಾವಿಸುವವರು ದೇಶದ ಗಡಿ ಕಾಯುವ ಯೋಧರು, ಪೊಲೀಸರು, ವಿವಿಧ ಸಂಘ ಸಂಸ್ಥೆಗಳವರು ಎನ್ನುವುದನ್ನು ವಿದ್ಯಾರ್ಥಿಗಳು ಮೊದಲು ಅರ್ಥಮಾಡಿಕೊಳ್ಳಬೇಕು. ಚಿತ್ರನಟರನ್ನು ಮಾಡಲ್‍ಗಳನ್ನಾಗಿಟ್ಟುಕೊಳ್ಳುವ ಬದಲು ದೇಶಭಕ್ತರ ವಿಚಾರ, ಇತಿಹಾಸಗಳನ್ನು ಅರ್ಥಮಾಡಿಕೊಂಡಾಗ ನಿಜವಾಗಿಯೂ ದೇಶ ಭಕ್ತಿ ಮೂಡುತ್ತದೆ ಎಂದು ಮಕ್ಕಳಿಗೆ ತಿಳಿಸಿದರು.

ಪಠ್ಯಗಳ ಜೊತೆಗೆ ಮಕ್ಕಳಿಗೆ ಪಠ್ಯೇತರ ವಿಷಯಗಳನ್ನು ತಿಳಿಸುವ ಜವಾಬ್ದಾರಿ ಶಿಕ್ಷಕರುಗಳ ಮೇಲಿದೆ. ದೇಶದ ಇತಿಹಾಸ, ಚರಿತ್ರೆ, ಸಂಸ್ಕೃತಿಯನ್ನು ಮಕ್ಕಳು ತಿಳಿದುಕೊಂಡಾಗ ದೇಶದ ಬಗ್ಗೆ ಗೌರವ ಮೂಡುತ್ತದೆ ಎಂದರು.

ಕಾರ್ಕಳದಿಂದ ಆಗಮಿಸಿದ್ದ ಅಕ್ಷಯ ಗೋಕಲೆ ಮಾತನಾಡಿ ವೀರಸನ್ಯಾಸಿ ಸ್ವಾಮಿ ವಿವೇಕಾನಂದರು, ಛತ್ರಪತಿ ಶಿವಾಜಿ ಮಹಾರಾಜರು ಅಪ್ಪಟ ದೇಶಭಕ್ತರಾಗಿದ್ದರು. ಮಕ್ಕಳು ಮನೆಗೆ ಹೋದ ಮೇಲೆ ತಂದೆ-ತಾಯಿಯನ್ನು ದೇವರ ಮುಂದೆ ಕರೆದುಕೊಂಡು ಹೋಗಿ ನಮಸ್ಕರಿಸಿ ಉತ್ತಮ ಪ್ರಜೆಗಳಾಗುತ್ತೇವೆ. ಜೊತೆಗೆ ಗುರು-ಹಿರಿಯರನ್ನು ಗೌರವಿಸುವ ಸಂಸ್ಕಾರ ಕಲಿಯುವುದಾಗಿ ಪ್ರತಿಜ್ಞೆ ಮಾಡಿ ಎಂದು ಹೇಳಿದರು.

ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಸತ್ಯನಾರಾಯಣಶೆಟ್ಟಿ, ಕಾರ್ಯದರ್ಶಿ ಅಜಯ್‍ಕುಮಾರ್, ಸಹ ಕಾರ್ಯದರ್ಶಿ ಗಿರೀಶ್, ವಾಸವಿ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸುಮ ಅನಂತ್,  ಕಾರ್ಯದರ್ಶಿ ಲಕ್ಷ್ಮಿರಮಕಾಂತ್ ವೇದಿಕೆಯಲ್ಲಿದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ರಾಧಮಣಿ ಕೆ.ಆರ್.ಸ್ವಾಗತಿಸಿದರು. ಶ್ರೀಮತಿ ಲೀಲಾವತಿ, ಶ್ರೀಮತಿ ಸಂಗೀತ ನಿರೂಪಿಸಿದರು.

ನಿವೃತ್ತ ವಿಷಯ ಪರಿವೀಕ್ಷಕ ಯೋಗೇಶ್‍ರನ್ನು ಸನ್ಮಾನಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!