Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ

Facebook
Twitter
Telegram
WhatsApp

 

ಚಿತ್ರದುರ್ಗ,(ಜುಲೈ.18) : ಪ್ರಸಕ್ತ ಸಾಲಿಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-3ಬಿಯಲ್ಲಿ ಬರುವ ಲಿಂಗಾಯತ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲ, ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ www.kvldcl.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಕಾಯಕಕಿರಣ ಯೋಜನೆಯಡಿ ಸಾಲ, ಸಹಾಯಧನ ಸೌಲಭ್ಯ, ಪಡೆಯಲು ವೃತ್ತಿ  ಕಸುಬುದಾರರು ಹಾಗೂ ಕುಶಲಕರ್ಮಿಗಳಿಗೆ ಆರ್ಥಿಕ  ಚಟುವಟಿಕೆ ಕೈಗೊಳ್ಳಲು ರೂ.1,00,000 ಲಕ್ಷಗಳವರೆಗೆ ಆರ್ಥಿಕ ನೆರವು ನೀಡಲಾಗುವುದು.

ಸ್ವ-ಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಯಡಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ 15 ಸದಸ್ಯರಿಗೆ ತಲಾ ರೂ.7,500 ಸಹಾಯಧನ ಹಾಗೂ 7,500 ರೂಗಳ ಸಾಲವನ್ನು ಶೇ 4 ರಷ್ಟು ಬಡ್ಡಿ ದರದಲ್ಲಿ ಪ್ರತಿ ಗುಂಪಿಗೆ 1,12,500 ಸಹಾಯಧನ ಹಾಗೂ 1,12,500 ಸಾಲ ಒಟ್ಟು  ರೂ.2,25,000 ನೀಡಲಾಗುವುದು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಹತೆಗಳು : ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000 ಹಾಗೂ ಪಟ್ಟಣ ಪ್ರದೇಶದವರಿಗೆ ರೂ 1,20,000 ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55ವರ್ಷಗಳ ಮಿತಿಯಲ್ಲಿರಬೇಕು, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ

ಪ್ರಸಕ್ತ ಸಾಲಿಗೆ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ  ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು https://suvidha.karnataka.in ವೆಬ್‍ಸೈಟ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 12 ಕೊನೆಯ ದಿನವಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯಲು ಬಯಸುವ ಅಭ್ಯಥಿರ್üಗಳು ಪ್ರವರ್ಗ 1ಕ್ಕೆ ಸೇರಿದ ಕ್ರಮ ಸಂಖ್ಯೆ 53 (ಎ) ಯಿಂದ 53(ವಿ) ವರೆಗಿನ ಉಪ್ಪಾರ, ಬೆಲ್ದರ್, ಚುನಾರ್, ಗಾವಾಡಿ, ಗೌಂದಿ, ಕಲ್ಲುಕುಟ್ಟಿಗ ಉಪ್ಪಾರ, ಲೋನಾರಿ, ಮೇಲುಸಕ್ಕರೆಯವರು, ಮೇಲುಸಕ್ಕರೆ, ನಾಮದ ಉಪ್ಪಾರ, ಪಡಿತ್ ಅಥವಾ ಪಡ್ತಿ, ಪಡಿತಿ, ವಾಡಿ, ಸಗರ, ಸುಣ್ಣಗಾರ, ಸುಣ್ಣಉಪ್ಪಾರ, ಉಪ್ಪಳಿಗ, ಉಪ್ಪಳಿಗಶೆಟ್ಟಿ, ಉಪ್ಪಳಿಯನ್, ಉಪ್ಪೇರ, ಯಕಲಾರ, ಎಕ್ಕಲಿ, ಜಾತಿಗೆ ಸೇರಿದವರಾಗಿರಬೇಕು.

ಅರಿವು ಶೈಕ್ಷಣಿಕ ಸಾಲ ಯೋನೆಯಡಿ (ನವೀಕರಣ) ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಉಪ್ಪಾರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ (ನವೀಕರಣ) ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ 2022-23ನೇ ಸಾಲಿನಲ್ಲಿ  ವ್ಯಾಸಾಂಗ ಮಾಡುತ್ತಿದ್ದಲ್ಲಿ ಮುಂದುವರಿದ ಕಂತುಗಳಿಗೆ  ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು: ಅರ್ಜಿದಾರರು  ಚಾಲ್ತಿಯಲ್ಲಿರುವ ಅರ್ಹ ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ 98,000 ಪಟ್ಟಣ ಪ್ರದೇಶದವರಿಗೆ 1,20,000ದ ಒಳಗಿರಬೇಕು. 18ರಿಂದ 55 ವರ್ಷದೊಳಗಿರಬೇಕು. ಆಧಾರ್ ಕಾರ್ಡ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಚಾಲ್ತಿಯಲ್ಲಿರುವ ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬೇಕು ಎಂದು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!