ಬೆಂಗಳೂರು: ಗುತ್ತುಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ಇಡೀ ರಾಜಕೀಯದಲ್ಲಿಯೇ ತಲ್ಲಣ ಉಂಟು ಮಾಡಿತ್ತು. ಮಾಜಿ ಸಚಿವ ಈಶ್ಚರಪ್ಪ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆಯನ್ನು ನೀಡಿದ್ದರು. ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಾಗ ನೇರವಾಗಿ ಮಾಜಿ ಸಚಿವ ಈಶ್ವರಪ್ಪ ಹೆಸರನ್ನು ಉಲ್ಲೇಖಿಸಿದ್ದರು. ಇದೀಗ ಈ ಪ್ರಕರಣದಲ್ಲಿ ಈಶ್ವರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಉಡುಪಿ ಪೊಲೀಸರು ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಆದರೆ ಈ ವರದಿಯನ್ನು ಕೋರ್ಟ್ ಇನ್ನು ಅಂಗೀಕರಿಸಿಲ್ಲ. ಹೀಗಾಗಿ ದೂರುದಾರರಿಗೆ ಇನ್ನೂ ಅಧಿಕೃತವಾಗಿ ಮಾಹಿತಿ ಸಿಕ್ಕಿಲ್ಲ. ಮೂಲಗಳ ಪ್ರಕಾರ ಈ ಕೇಸ್ ಗೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ ಎನ್ನಲಾಗಿದೆ.
ಇನ್ನು ಗುತ್ತುಗೆದಾರ ಸಂತೋಷ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅದಕ್ಕೂ ಮುನ್ನ ವಾಟ್ಸಾಪ್ ಮೂಲಕವೂ ಸಂದೇಶ ಕಳುಹಿಸಿದ್ದರು. ಡೆತ್ ನೋಟ್ ನಲ್ಲಿ ಮಾಜಿ ಸಚಿವ ಈಶ್ವರಪ್ಪ ಅವರ ಹೆಸರನ್ನೇ ನೊಂದಾಯಿಸಲಾಗಿತ್ತು. ಉಡುಪಿ ಪೊಲೀಸರು ಅಂದಿನಿಂದಲೂ ಈ ಕೇಸ್ ಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದರು. ಸಾಕ್ಷ್ಯಾಧಾರಾಗಳ ಕೊರತೆ ಹಿನ್ನೆಲೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ.