Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಕಿಯಿಂದ ರಾಷ್ಟ್ರಪತಿವರೆಗೂ ದುರಂತಗಳನ್ನು ಮೆಟ್ಟಿ ನಿಂತು ದೇಶದ ಅತ್ಯುನ್ನತ ಸ್ಥಾನಕ್ಕೇರಿದ ದ್ರೌಪದಿ ಮುರ್ಮು

Facebook
Twitter
Telegram
WhatsApp

ಶಿಕ್ಷಕಿಯಿಂದ ರಾಷ್ಟ್ರಪತಿವರೆಗೂ ದುರಂತಗಳನ್ನು ಮೆಟ್ಟಿ ನಿಂತು ದೇಶದ ಅತ್ಯುನ್ನತ ಸ್ಥಾನಕ್ಕೇರಿದ ದ್ರೌಪದಿ ಮುರ್ಮು

ಹೊಸದಿಲ್ಲಿ: ಭಾರತದ ನೂತನ ರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ವಿಜಯ ಪತಾಕೆ ಹಾರಿಸಿದ್ದಾರೆ.

ಅವರು ತಮ್ಮ ಎದುರಾಳಿ ಯಶವಂತ್ ಸಿನ್ಹಾ ವಿರುದ್ಧ ಭಾರಿ ಬಹುಮತದೊಂದಿಗೆ ಜಯಶಾಲಿಯಾದರು. ದ್ರೌಪದಿ ಮುರ್ಮು ಭಾರತದ ಮೊದಲ ಆದಿವಾಸಿ ರಾಷ್ಟ್ರಪತಿಯಾಗಿ ಇತಿಹಾಸ ಸೃಷ್ಟಿಸಿದರು. ದ್ರೌಪದಿ ಮುರ್ಮು 2,161 ಮತಗಳನ್ನು (ಶೇ 68) ಪಡೆದರೆ, ಯಶವಂತ್ 1,058 ಮತಗಳನ್ನು (ಶೇ 31.1) ಪಡೆದರು.

ರಾಷ್ಟ್ರಪತಿ ಹುದ್ದೆಗೆ ಗೆದ್ದ ಎನ್ ಡಿಎ ಅಭ್ಯರ್ಥಿಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಹುಲ್ ಗಾಂಧಿ, ಯಶವಂತ್ ಸಿನ್ಹಾ ಸೇರಿದಂತೆ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂತು. ಅವರು ಈ ತಿಂಗಳ 25 ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ದ್ರೌಪದಿ ಮುರ್ಮು ನಡೆದು ನಂದ ದಾರಿ :  ದ್ರೌಪದಿ ಮುರ್ಮು ಅವರು ಅಧ್ಯಕ್ಷೀಯ ಸ್ಥಾನಕ್ಕೆ ಏರಿರುವುದು ನಾಗರಿಕತೆ, ಸಾಂವಿಧಾನಿಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದಲ್ಲಿ ಭಾರತದ ಅಚಲ ನಂಬಿಕೆಗೆ ಸಾಕ್ಷಿಯಾಗಿದೆ.

ದ್ರೌಪದಿ ಮುರ್ಮು ಜೂನ್ 20, 1958 ರಂದು ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಬೈದಪೋಸಿಯಲ್ಲಿ ಜನಿಸಿದರು. ಭುವನೇಶ್ವರದ ರಮಾದೇವಿ ಮಹಿಳಾ ಕಾಲೇಜಿನಲ್ಲಿ ಬಿಎ ಮುಗಿಸಿದರು. ಅವರು ಶಾಲಾ ಶಿಕ್ಷಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆ ನಂತರ ರಾಜ್ಯ ನೀರಾವರಿ ಮತ್ತು ವಿದ್ಯುತ್ ಇಲಾಖೆಯಲ್ಲಿ ಕಿರಿಯ ಸಹಾಯಕರಾಗಿ ಕೆಲಸ ಮಾಡಿದರು. ದ್ರೌಪದಿ ಮುರ್ಮು ಅವರ ಗಂಡನ ಹೆಸರು ಶ್ಯಾಮ್ ಚರಣ್ ಮುರ್ಮು. ಅವರಿಗೆ ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಇದ್ದಾರೆ. ರಾಜಕೀಯಕ್ಕೆ ಬರುವ ಮುನ್ನ ಶಿಕ್ಷಕರಾಗಿ ಸೇವೆ ಸಲ್ಲಿಸಿದರು.

ರಾಜಕೀಯ ಜೀವನ : 1977 ರಲ್ಲಿ ರಾಯ್ ರಂಗಾಪುರ್ ನಲ್ಲಿ ನಗರಸಭೆಯ ಸದಸ್ಯರಾಗುವ ಮೂಲಕ ಅವರು ತಮ್ಮ ರಾಜಕೀಯ ಜೀವನ ಆರಂಭಿಸಿದರು. ನಂತರ 2000 ರಲ್ಲಿ ಅವರು ರಾಯ್ ರಂಗಾಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾದರು. ಬಿಜೆಡಿ-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದರು. ಸಾರಿಗೆ, ವಾಣಿಜ್ಯ, ಮೀನುಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆಗಳನ್ನು ಸಮರ್ಥವಾಗಿ ನಿಭಾಯಿಸಿದರು. ಈ ಹಿಂದೆ ಅವರು ಒಡಿಶಾ ಬಿಜೆಪಿ ಬುಡಕಟ್ಟು ಮೋರ್ಚಾದ ಉಪಾಧ್ಯಕ್ಷೆ ಮತ್ತು ಅಧ್ಯಕ್ಷರಾಗಿದ್ದರು. 2010 ಮತ್ತು 2013ರಲ್ಲಿ ಮಯೂರ್‌ಭಂಜ್ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಬಿಜೆಪಿ ಎಸ್ಟಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ದುರಂತಗಳನ್ನು ಮೆಟ್ಟಿ ನಿಂತು ದೇಶದ ಅತ್ಯುನ್ನತ ಸ್ಥಾನಕ್ಕೇರಿದ  ದ್ರೌಪದಿ ಮುರ್ಮು ತಮ್ಮ ವೈಯಕ್ತಿಕ ಬದುಕಿನಲ್ಲಿ ಹಲವು ಏಳುಬೀಳು, ದುರಂತಗಳನ್ನು ಎದುರಿಸಿದ್ದಾರೆ . 2009ರಲ್ಲಿ ಹಿರಿಯ ಮಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರೆ, 2012ರಲ್ಲಿ ಎರಡನೇ ಮಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ. ಈ ದುರಂತಗಳಿಂದ ಚೇತರಿಸಿಕೊಳ್ಳುತ್ತಿರುವಾಗ ಆಕೆಯ ಪತಿ ಶ್ಯಾಮ್ ಚರಣ್ 2014ರಲ್ಲಿ ಹೃದಯಾಘಾತದಿಂದ ಮೃತಪಟ್ಟರು.

ಪತಿ ಹಾಗೂ ಇಬ್ಬರು ಪುತ್ರರನ್ನು ಕಳೆದುಕೊಂಡು ಒಂಟಿಯಾಗಿದ್ದ ಆಕೆ ಮತ್ತೆ ಮಗಳು ಹಾಗೂ ಕಿರಿಯ ಸಹೋದರನೊಂದಿಗೆ ಜನಸೇವೆಯಲ್ಲಿ ತೊಡಗಿಸಿಕೊಂಡರು. ಅವರು 2015 ರಲ್ಲಿ ಜಾರ್ಖಂಡ್ ರಾಜ್ಯಪಾಲರಾದರು. ದ್ರೌಪದಿ ಮುರ್ಮು ರಾಜ್ಯದ ಮೊದಲ ಮಹಿಳಾ ರಾಜ್ಯಪಾಲರಾಗಿದ್ದರು. ಇದೀಗ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಆಯ್ಕೆಯಾಗಿರುವ ಅವರು, ಆ ಗೌರವ ಪಡೆದ ಮೊದಲ ಒಡಿಶಾ ನಿವಾಸಿ ಮತ್ತು ಮೊದಲ ಬುಡಕಟ್ಟು ಮಹಿಳೆ ಎಂಬ ಇತಿಹಾಸ ಸೃಷ್ಟಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!