ಹೊಸದಿಲ್ಲಿ: ಪ್ರಸ್ತುತ ತಿಹಾರ್ ಜೈಲಿನ ಸೆಲ್ ನಂ.7ರಲ್ಲಿ ಬಂಧಿಯಾಗಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆಯಿಂದ ಮಲಿಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
2017 ರ ಭಯೋತ್ಪಾದಕ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಿಕ್ ಅವರನ್ನು ದೋಷಿ ಎಂದು ಘೋಷಿಸಲಾಯಿತು ಮತ್ತು ಮೇ 25 ರಂದು NIA ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತು. ಅವರ ಉಪವಾಸ ಸತ್ಯಾಗ್ರಹದ ಹಿಂದಿನ ಕಾರಣವನ್ನು ಕೇಳಿದಾಗ, ಅಧಿಕಾರಿಯು ಯಾವುದೇ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಇಚ್ಛಿಸಿಲ್ಲ. ಆದರೆ, ಮಲಿಕ್ ತನ್ನ ಪ್ರಕರಣಗಳ ತನಿಖೆ ನಡೆಸುತ್ತಿರುವ ಏಜೆನ್ಸಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಜೈಲು ಮೂಲಗಳು ತಿಳಿಸಿವೆ.
“ತನ್ನ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ಮಲಿಕ್ ಆರೋಪಿಸುತ್ತಿದ್ದಾರೆ, ಆದ್ದರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ” ಎಂದು ಮೂಲಗಳು ತಿಳಿಸಿವೆ. ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ, ಮಾಜಿ ಕೇಂದ್ರ ಸಚಿವ ಎ. ರಾಜಾ, ಸಹಾರಾ ಮುಖ್ಯಸ್ಥ ಸುಬ್ರತಾ ರಾಯ್, ಕ್ರಿಶ್ಚಿಯನ್ ಮೈಕೆಲ್ ಸೇರಿದಂತೆ ಹಲವಾರು ಹೈ-ಪ್ರೊಫೈಲ್