Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಯವರ ಹುಟ್ಟುಹಬ್ಬ ಆಚರಣೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿರವರ ಹುಟ್ಟುಹಬ್ಬದ ಪ್ರಯುಕ್ತ ಗೋನೂರು ಸಮೀಪವಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಸೋಮವಾರ ಕೇಕ್ ಕತ್ತರಿಸಿ ಸರಳವಾಗಿ ಆಚರಿಸಲಾಯಿತು.

ಬಿಜೆಪಿ.ಯುವ ಮುಖಂಡ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿರವರ ಪುತ್ರ ಡಾ.ಸಿದ್ದಾರ್ಥ ನಿರಾಶ್ರಿತರೊಂದಿಗೆ ಕೇಕ್ ಕತ್ತರಿಸಿದರು.

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್‍ಸಿದ್ದಾಪುರ ಮಾತನಾಡಿ 1994 ರಿಂದ ಸತತವಾಗಿ ಆರು ಬಾರಿ ಚಿತ್ರದುರ್ಗ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿರವರು ಕ್ಷೇತ್ರಾದ್ಯಂತ ಅನೇಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಜನಾನುರಾಗಿಯಾಗಿದ್ದಾರೆ. ಅನುಭವಿ ಹಿರಿಯ ರಾಜಕಾರಣಿಯಾಗಿರುವ ಜಿ.ಹೆಚ್.ತಿಪ್ಪಾರೆಡ್ಡಿರವರು ಬಿಜೆಪಿ.ಸರ್ಕಾರದಲ್ಲಿ ಮಂತ್ರಿಯಾಗಿ ಇನ್ನು ಹತ್ತಾರು ವರ್ಷಗಳ ಕಾಲ ಕ್ಷೇತ್ರದ ಜನತೆಯ ಸೇವೆ ಮಾಡುವುದಕ್ಕಾಗಿ ಆರೋಗ್ಯ, ಐಶ್ವರ್ಯ ಸಕಲ ಸಂಪತ್ತು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ನರೇಂದ್ರ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯರುಗಳಾದ ಎ.ರೇಖ, ಡಿ.ರಾಜು, ಉಷಬಾಯಿ, ನಗರಸಭೆ ಸದಸ್ಯ ಹರೀಶ್, ಗೋನೂರು ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ಮಹದೇವಯ್ಯ ವೇದಿಕೆಯಲ್ಲಿದ್ದರು.
ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿರುವವರಿಗೆ ಸಿಹಿ ಊಟ ಬಡಿಸಲಾಯಿತು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!