Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಠ್ಯೇತರ ಚಟುವಟಿಕೆಗಳಲ್ಲಿ ರಂಗಭೂಮಿ ಕ್ಷೇತ್ರದ ಆಯ್ಕೆ ಉತ್ತಮ ಕಲಿಕೆಗೆ ಸಹಕಾರಿ : ಡಾ.ಎ.ಜಿ.ಬಸವರಾಜಪ್ಪ

Facebook
Twitter
Telegram
WhatsApp

 

ಚಿತ್ರದುರ್ಗ : ಶಿಕ್ಷಕರು ರಾಷ್ಟ್ರವನ್ನು ಬಲಿಷ್ಠಗೊಳಿಸುವ ಶಕ್ತಿಯನ್ನು ಹೊಂದಿರುತ್ತಾರೆ. ಕಲೆಗಳಲ್ಲಿ ರಂಗಕಲೆ ವಿಶಿಷ್ಟವಾಗಿದೆ. ಸರ್ಕಾರದ ಹಲವು ಯೋಜನೆಗಳನ್ನು ಸಾಂಸ್ಕೃತಿಕ ಕ್ಷೇತ್ರದಲ್ಲಿಯೇ ಮಹತ್ತರ ಸ್ಥಾನ ಪಡೆದ ರಂಗಭೂಮಿಯ ಹಲವು ಆಯಾಮಗಳಲ್ಲಿ ಪ್ರದರ್ಶನಗೊಳ್ಳುತ್ತವೆ ಎಂದು ಪ್ರಾಚಾರ್ಯ ಡಾ.ಎ.ಜಿ.ಬಸವರಾಜಪ್ಪ ಅಭಿಪ್ರಾಯಪಟ್ಟರು.

ನಗರದ ಕೋಟೆರಸ್ತೆಯ ಕಾಮನಬಾವಿ ಬಡಾವಣೆಯಲ್ಲಿರುವ ಶ್ರೀರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ರಂಗಸೌರಭ ಕಲಾ ಸಂಘ ಹಾಗೂ ಶ್ರೀರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ 2021-22ನೇ ಸಾಲಿನ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ಶಿಕ್ಷಣದಲ್ಲಿ ರಂಗಕಲೆ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಆಸಕ್ತಿ ಮೂಡಿಸುವ ಪಠ್ಯೇತರ ಚಟುವಟಿಕೆಗಳಲ್ಲಿ ರಂಗಭೂಮಿ ಕ್ಷೇತ್ರದ ಆಯ್ಕೆ ಉತ್ತಮ ಕಲಿಕೆಗೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳ ಮುಂದೆ ಶಿಕ್ಷಕರು ಕಲಾವಿದರಾಗಿ ಬೋಧನಾ ಪ್ರಕ್ರಿಯೆಯಲ್ಲಿ ತೊಡಗಬೇಕು.ಆಗ ಮಾತ್ರ ವಿದ್ಯಾರ್ಥಿಗೆ ಬೋಧಿಸಿದ ವಿಷಯಗಳು ಪರಿಣಾಮಕಾರಿಯಾಗಿ ಬೇಗ ಮನದಟ್ಟಾಗುತ್ತದೆ ಎಂದರು.

ಉಪಪ್ರಾಚಾರ್ಯೆ ಕವಿತಾ.ವಿ ಅಧ್ಯಕ್ಷತೆ ವಹಿಸಿ ಮಾತನಾಡಿ ರಂಕಕಲೆ ಎಂಬುದು ಕಲೆಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ ಅಂತರಂಗ ಮತ್ತು ಬಹಿರಂಗ ಎರಡನ್ನೂ ಸದಾ ಉತ್ಸಾಹದಲ್ಲಿಡುವ ಸೃಜನಾತ್ಮಕ ಮತ್ತು ಕ್ರಿಯಾಶೀಲ ಕಲೆಯಾಗಿದೆ ಎಂದರು.ಕನ್ನಡ ಉಪನ್ಯಾಸಕ ಡಾ.ಮೋಹನ್‍ಕುಮಾರ್ ಕೆ ಇವರು ಮುಖ್ಯಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿ ರಂಗಕಲೆ ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ರಂಗಭೂಮಿಯ ಪ್ರಾಯೋಗಿಕ ಕ್ರಮಗಳು ಹೆಚ್ಚಾಗಿ ಅವಕಾಶಗಳನ್ನು ಪಡೆದುಕೊಳ್ಳಬೇಕು ಎಂದರು.

ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಕೆ.ಶಾರದಮ್ಮ, ಯೋಗಶಿಕ್ಷಕಿ ಹೇಮಾವತಿ, ಉಪನ್ಯಾಸಕರಾದ ಇ.ಮಹಾಂತೇಶ್, ನಟರಾಜ.ಬಿಎಸ್, ಪಾತಲಿಂಗಪ್ಪ, ಕು.ಶಾಲಿನಿ ಐರಣಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದರು.

ರಂಗ ನಿರ್ದೇಶಕ ಮತ್ತು ರಂಗ ಸಂಪನ್ಮೂಲ ವ್ಯಕ್ತಿ ಕೆ.ಪಿ.ಎಂ.ಗಣೇಶಯ್ಯ ಪ್ರಶಿಕ್ಷಣಾರ್ಥಿಗಳಿಗೆ ಶಿಕ್ಷಣದಲ್ಲಿ ರಂಗಕಲೆ ಹಾಗೂ ರಂಗ ಪ್ರಾಯೋಗಿಕ ತರಬೇತಿ ನೀಡಿದರು.

ಪ್ರಶಿಕ್ಷಣಾರ್ಥಿಗಳು ಆಂಗಿಕ, ವಾಚಿಕ, ಆಹಾರ್ಯ ಮತ್ತು ಸಾತ್ವಿಕ ತಂಡಗಳು ಕ್ರಮವಾಗಿ ಅನಕ್ಷರತೆ, ಬಾಲಕಾರ್ಮಿಕ, ಮೂಢನಂಬಿಕೆ ಮತ್ತು ಶಿಕ್ಷಣ ಸಂಸ್ಕøತಿ ಮುಂತಾದ ವಿಷಯ ವಸ್ತುಗಳನ್ನು ಆಧರಿಸಿದ ನಾಟಕ ಪ್ರದರ್ಶನಗಳನ್ನು ಅಭಿನಯಿಸಿದರು.

ಪ್ರಶಿಕ್ಷಣಾರ್ಥಿ ಎಂ.ಬಸವರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು. ಚೈತ್ರಾ ಶಾಖಾಪುರ್ ಪ್ರಾರ್ಥಿಸಿದರು. ಡಿ.ಗಾಯಿತ್ರಿ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿ ನಟರಾಜ ಬಿ.ಜಿ ವಂದಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!