ಬೆಂಗಳೂರು: ಕಳೆದ ಎರಡ್ಮೂರು ದಿನದಿಂದ ರಾಜ್ಯದಲ್ಲಿ ಸಾಕಷ್ಟು ಮಳೆಯಾಗುತ್ತಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಕೆರೆ ಕಟ್ಟೆಗಳು ತುಂಬಿವೆ. ಬೆಳೆಯ ಪ್ರದೇಶಕ್ಕೆಲ್ಲಾ ನೀರು ನಿಂತಿದೆ. ಇದೀಗ ಇನ್ನು ಎರಡ್ಮೂರು ದಿನ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ ಹವಮಾನ ಇಲಾಖೆ.
ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರಿನ ಜನರಿಗೂ ಸಹ ಎಚ್ಚರಿಕೆಯನ್ನು ನೀಡಿದೆ. ಮುಂದಿನ ಎರಡ್ಮೂರು ದಿನ ಜೋರು ಮಳೆಯಾಗುವ ಸಾಧ್ಯತೆ ಇದೆ. ರಾಜಕಾಲುವೆ ಅಕ್ಕ ಪಕ್ಕ ವಾಸಿಸುವವರಿಗೆ ಎಚ್ಚರಿಕೆಯನ್ನು ನೀಡಿದೆ. ನಗರದಲಿ ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇದೆ. ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೂ ಎಚ್ಚರದಿಂದ ಇರಲು ಹವಮಾನ ಇಲಾಖೆ ಸೂಚನೆ ನೀಡಿದೆ.