ಚಿತ್ರದುರ್ಗ,(ಸೆಪ್ಟಂಬರ್. 03) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯತ್‍ಗಳ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 2022-23ನೇ ಸಾಲಿನ ಚಿತ್ರದುರ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟಂಬರ್ 05ರಂದು ಏರ್ಪಡಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಚಿತ್ರದುರ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟಂಬರ್ 10ರಂದು ಜಿಲ್ಲಾ ಕ್ರೀಡಾಂಗಣ ಚಿತ್ರದುರ್ಗದಲ್ಲಿ ಏರ್ಪಡಿಸಲಾಗಿದೆ.
ಸೆಪ್ಟಂಬರ್ 4ರಂದು ಹಿರಿಯೂರು ತಾಲ್ಲೂಕುಮಟ್ಟದ ದಸರಾ ಕ್ರೀಡಾಕೂಟ ಹಿರಿಯೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಹಾಗೂ ಚಳ್ಳಕೆರೆ ತಾಲ್ಲೂಕುಮಟ್ಟದ ದಸರಾ ಕ್ರೀಡಾಕೂಟ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ಶ್ರೀ ಗುರುತಿಪ್ಪೇರುದ್ರ ಸ್ವಾಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಸೆಪ್ಟಂಬರ್ 6ರಂದು ಹೊಸದುರ್ಗ ತಾಲ್ಲೂಕುಮಟ್ಟದ ದಸರಾ ಕ್ರೀಡಾಕೂಟ ಹೊಸದುರ್ಗ ತಾಲ್ಲೂಕು ಕ್ರೀಡಾಂಗಣದಲ್ಲಿ, ಸೆಪ್ಟಂಬರ್ 10ರಂದು ಚಿತ್ರದುರ್ಗ ತಾಲ್ಲೂಕುಮಟ್ಟದ ದಸರಾ ಕ್ರೀಡಾಕೂಟವು ಚಿತ್ರದುರ್ಗ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬ್ಬಡಿ, ಫುಟ್‍ಬಾಲ್, ಥ್ರೋಬಾಲ್ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ.
ಅಥ್ಲೆಟಿಕ್ಸ್ ಸ್ಪರ್ಧೆಗಳ ವಿವರ: (ಪುರುಷರಿಗೆ) 100ಮೀ, 200ಮೀ, 400ಮೀ, 800ಮೀ, 1500ಮೀ: 5000 ಮೀ. ಓಟ, ಮತ್ತು ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ. 110 ಮೀ. ಹರ್ಡಲ್ಸ್, 4*100ಮೀ ರಿಲೇ, 4*400 ರಿಲೇ.
ಮಹಿಳೆಯರಿಗೆ. 100ಮೀ. 200ಮೀ, 400ಮೀ, 1500ಮೀ 3000 ಓಟ, ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100ಮೀ. ರಿಲೇ, 4*400 ರಿಲೇ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 9611673475 ಹಾಗೂ ವಾಲಿಬಾಲ್ ತರಬೇತುದಾರ ಮಹಮ್ಮದ್ ಮುಹೀಬುಲ್ಲಾ ಅವರನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.