ಬೆಂಗಳೂರು: ವರ್ತೂರು ಬಳಿ ಮಳೆಹಾನಿ ಪ್ರದೇಶಕ್ಕೆ ಶಾಸಕ ಅರವಿಂದ್ ಲಿಂಬಾವಳಿ ಇಂದು ಭೇಟಿ ನೀಡಿದ್ದ ವೇಳೆ ಮಹಿಳೆಯೊಬ್ಬರು ಮನವಿ ಪತ್ರ ತಂದಿದ್ದರು. ಆದರೆ ಶಾಸಕ ಅರವಿಂದ್ ಲಿಂಬಾವಳಿ ಆ ಮಹಿಳೆ ಬಳಿ ಬಹಳ ಆಕ್ರೋಶದಿಂದ ನಡೆದುಕೊಂಡಿದ್ದರು. ಇದೀಗ ಆ ವಿಚಾರದಲ್ಲಿ ಟ್ವೀಟ್ ಮಾಡಿದ್ದು, ನಾನು ಕ್ಷಮೆ ಕೇಳಲು ಸಿದ್ದರಿದ್ದೇವೆ ಎಂದಿದ್ದಾರೆ.
ಈ ಬಗ್ಗೆ ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ. ಆದರೆ ನಿಮ್ಮ ಪಕ್ಷದ ಇದೇ ಕಾರ್ಯಕರ್ತೆ ರೂತ್ ಸಗಾಯ್ ಮೇರಿ ಎಷ್ಟೋ ವರ್ಷಗಳಿಂದ ರಾಜಕಾಲುವೆ ಒತ್ತುವರಿ ಮಾಡಿ, ಜನರಿಗೆ ಸಮಸ್ಯೆಯುಂಟು ಮಾಡಿದ್ದಾರಲ್ಲ, ಅದನ್ನು ಖಾಲಿ ಮಾಡಲು ಹೇಳಿ. ನಿಮ್ಮ ಕಾರ್ಯಕರ್ತೆಯ ಮೊಂಡುತನವನ್ನು ಇಲ್ಲಿಗೇ ನಿಲ್ಲಿಸಲು ಹೇಳಿ ಎಂದು ಕಾಂಗ್ರೆಸ್ ನವರಿಗೆ ಹೇಳಿದ್ದಾರೆ.
ಸ್ತ್ರೀ ಉದ್ಧಾರಕರಂತೆ ಕೇವಲ ಬೂಟಾಟಿಕೆಯ ಮಾತಾಡುವ ಬಿಜೆಪಿಗರೇ, ನಿಮ್ಮ ಪಕ್ಷದ ಅರವಿಂದ ಲಿಂಬಾವಳಿಯವರು ಒಬ್ಬ ಜನಪ್ರತಿನಿಧಿಯಾಗಿ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡ ರೀತಿ ಅಕ್ಷಮ್ಯ. ಇಂಥ ಮಹಿಳಾ ವಿರೋಧಿ ನಡೆಯ ವಿರುದ್ಧ ಮಾತಾಡುವ ಧೈರ್ಯ ತೋರುತ್ತೀರಾ?. ಅರವಿಂದ ಲಿಂಬಾವಳಿಯವರು ಆ ಹೆಣ್ಣಿನ ಕ್ಷಮೆ ಕೇಳುತ್ತಾರ? ಎಂದು ಕಾಂಗ್ರೆಸ್ ನಾಯಕ ರಂದೀಪ್ ಸಂದೀಪ್ ಟ್ವೀಟ್ ಮಾಡಿದ್ದರು. ಆ ಟ್ವೀಟ್ ಅನ್ನು ಹಂಚಿಕೊಳ್ಳುವ ಮೂಲಕ ಅರವಿಂದ್ ಲಿಂಬಾವಳಿ ಚಾಲೆಂಜ್ ಹಾಕಿದ್ದಾರೆ.