Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಮುಂದೂಡಿಕೆ..!

Facebook
Twitter
Telegram
WhatsApp

 

ಚಿಕ್ಕಬಳ್ಳಾಪುರ: 2024ರ ವಿಧಾನಸಭಾ ಚುನಾವಣೆಗೆ ಎಲ್ಲಾ ರೀತಿಯಿಂದಲೂ ತಯಾರಿ ನಡೆಸುತ್ತಿರುವ ಬಿಜೆಪಿ ಅದರ ಭಾಗವಾಗಿ ಜನೋತ್ಸವ ಕಾರ್ಯಕ್ರಮ ಕೂಡ ಹಮ್ಮಿಕೊಂಡಿತ್ತು. ಆದರೆ ಇಂದು ಸಚಿವ ಉಮೇಶ್ ಕತ್ತಿಯವರು ಹಠಾತ್ ನಿಧನರಾಗಿದ್ದಾರೆ. ಇದರಿಂದ ಬಿಜೆಪಿ ನಾಯಕರು ಕೂಡ ಆಘಾತಗೊಂಡಿದ್ದಾರೆ. ಹೀಗಾಗಿ ಬಿಜೆಪಿ ಜನೋತ್ಸವ ಯಾತ್ರೆಯನ್ನು ಮುಂದೂಡಲಾಗಿದೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ಸಚಿವ ಮುನಿರತ್ನ, ಜನೋತ್ಸವ ಯಾತ್ರೆಯನ್ನು ಭಾನುವಾರಕ್ಕೆ ಮುಂದೂಡಲಾಗಿದೆ. ಉಮೇಶ್ ಕತ್ತಿಯವರ ನಮ್ಮನ್ನೆಲ್ಲ ಅಗಲಿದ್ದಾರೆ. ಬಹಳ ನೋವಿನ ಸಂಗತಿಯಿದು. ಶೋಕಾಚರಣೆ ಮಾಡಲಾಗುತ್ತಿದೆ. ಹೀಗಾಗಿ ಜನೋತ್ಸವ ಕಾರ್ಯಕ್ರಮವನ್ನು ಸೆ.11ಕ್ಕೆ ಮುಂದೂಡಲಾಗಿದೆ. ಜನೋತ್ಸವಕ್ಕೆ ಹೊರಟಿದ್ದವರೆಲ್ಲಾ ಭಾನುವಾರಕ್ಕೆ ಬರಬೇಕೆಂದು ತಿಳಿಸಿದ್ದಾರೆ.

ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ ಸರ್ಕಾರ 3 ದಿನಗಳ ಕಾಲ ಶೋಕಾಚರಣೆ ಮಾಡುತ್ತಿದ್ದಾರೆ. ಇದರ ನಡುವೆ ನಾಯಕರಿಂದಲೇ ಜನೋತ್ಸವ ಬೇಡ ಎಂಬ ಅಭಿಪ್ರಾಯಗಳು ಕೇಳಿ ಬಂದಿತ್ತು. ಹೀಗಾಗಿ ಮೂರು ದಿನಗಳ ಕಾಲ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಜನೋತ್ಸವ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಮುಂದೂಡಿಕೆಯಾಗಿಲ್ಲ. ಬದಲಿಗೆ ಈ ಹಿಂದೆ ಕೂಡ ಎರಡು ಬಾರಿ ಮುಂದೂಡಿಕೆಯಾಗಿತ್ತು. ಜುಲೈ ಹಾಗೂ ಆಗಸ್ಟ್ ತಿಂಗಳಲ್ಲು ನಿಗಧಿಯಾಗಿತ್ತು. ಆದರೆ ಅಂದು ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದ ಸಂದರ್ಭವಾಗಿದ್ದರಿಂದ ಜನೋತ್ಸಾಹ ಮುಂದೂಡಿಕೆಯಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!