ಮೈಸೂರು: ಈಗಾಗಲೇ ದಸರಾ ಸಂಭ್ರಮಕ್ಕೆ ಸಾಕ್ಷಿಯಾಗಲೂ ಆನೆಗಳ ಟೀಂ ಅರಮನೆ ಆವರಣಕ್ಕೆ ಎಂಟ್ರಿ ಕೊಟ್ಟು ತಾಲೀಮು ನಡೆಸುತ್ತಿವೆ. ಅಭಿಮನ್ಯು ನೇತೃತ್ವದಲ್ಲಿ ಆನೆಗಳು ತಾಲೀಮು ನಡೆಸುತ್ತಿವೆ. ನಾಲ್ಕು ಹೆಣ್ಣಾನೆಗಳು ಸಹ ಈ ಬಾರಿಯ ದಸರಾ ಉತ್ಸವದಲ್ಲಿ ಭಾಗಿಯಾಗುತ್ತಿವೆ. ಇನ್ನು ಈಗಾಗಲೇ ಶುರುವಾಗಿರುವ ದಸರಾ ತಯಾರಿಯ ಮಾಹಿತಿ ಇಲ್ಲಿದೆ.
ಸೆಪ್ಟೆಂಬರ್ 26ರಿಂದ ದಸರಾ ಉತ್ಸವ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಈಗಾಗಲೇ ಟ್ವೀಟ್ ಮೂಲಕ ತಿಳಿಸಿದ್ದಾರೆ. ಇನ್ನು ಸೆ.20ರ ಮಂಗಳವಾರದಿಂದ ಸಿಂಹಾಸನ ಜೋಡಣೆ ಆರಂಭವಾಗಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರಗೆ ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಸೆ.26ರಂದು ಖಾಸಗಿ ದರ್ಬಾರ್ ಹಾಗೂ ವಿವಿಧ ಪೂಜೆಗಳು, ಧಾರ್ಮಿಕ ವಿಧಿಗಳು ನೆರವೇರಲಿವೆ. ಅಂದೂ ಸಹ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಅಕ್ಟೋಬರ್ 4ರಂದು ಅರಮನೆಯಲ್ಲಿ ಆಯುಧಪೂಜೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರನ್ನು ನಿರ್ಬಂಧಿಸಲಾಗಿದೆ. ಅ.5ರಂದು ವಿಜಯದಶಮಿ ಆಚರಣೆ. ಅಂದೂ ಸಂಪೂರ್ಣ ಅರಮನೆ ಪ್ರವೇಶಕ್ಕೆ ನಿರ್ಬಂಧವಿದೆ. ಅ.20ರಂದು ಸಿಂಹಾಸನ ವಿಸರ್ಜನೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ.