ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸೂಚನೆ ನೀಡಿದ್ದಾರೆ.
ಯಡಿಯೂರಪ್ಪ, ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್ ಟಿ ಸೋಮಶೇಖರ್, ಡಾ. ಜಿ ಸಿ ಪ್ರಕಾಶ್, ಕೆ ರವಿ, ವಿರುಪಾಕಗಷಪ್ಪ ಯಮಕರಡಿ ವಿರುದ್ಧ ಪ್ರಕರಣ ದಾಖಲಾಗಿದೆ.