ಬೆಂಗಳೂರು: 454 ಪಿಎಸ್ಐ ಅಕ್ರಮ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಅರೆಸ್ಟ್ ಮಾಡಲಾಗಿದೆ. ಈ ಸಂಬಂಧ ಕೋರ್ಟ್ ಗೆ ಚಾರ್ಜ್ ಶೀಟ್ ಮಾಡಬೇಕಾಗಿದೆ.
ಈ ಬಗ್ಗೆ ಮಾತನಾಡಿದ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಪ್ರಕರಣಕ್ಕೆ ಸಂಬಂಧಿಸಿದಂತೆ 40 ದಿನದೊಳಗೆ ಚಾರ್ಜ್ ಶೀಟ್ ಸಲ್ಲಿಕೆ ಆಗಬೇಕು. ಅಕ್ಟೋಬರ್ ವೇಳೆಗೆ ಎಲ್ಲಾ ಕೇಸ್ ಗಳ ಚಾರ್ಜ್ ಶೀಟ್ ಆಗುತ್ತೆ ಎಂದು ತಿಳಿಸಿದ್ದಾರೆ. ಚಾರ್ಜ್ ಶೀಟ್ ಸಲ್ಲಿಕೆಯಾದ ಬಳಿಕ ಮರುಪರೀಕ್ಷೆಯ ದಿನಾಂಕ ಅನೌನ್ಸ್ ಮಾಡಲಾಗುತ್ತದೆ ಎಂದಿದ್ದಾರೆ.
ಇನ್ನು ಈಗಾಗಲೇ ಸರ್ಕಾರ ಮರುಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ಮಾಡಿದೆ. ಆ ಬಗ್ಗೆ ಮಾಹಿತಿಯನ್ನು ನೀಡಿದೆ. ಈಗ ಚಾರ್ಜ್ ಶೀಟ್ ಸಲ್ಲಿಕೆಯ ತನಕ ಪರೀಕ್ಷೆ ನಡೆಸಲು ಆಗುವುದಿಲ್ಲ. ಯಾಕೆಂದರೆ ಯಾರ್ಯಾರು ಅಪರಾಧಿ ಇರುತ್ತಾರೆ ಅವರಿಗೆ ಅವಕಾಶ ಸಿಗಬಾರದು. ಅದಕ್ಕೆ ಕೊನೆತನಕ ಕಾಯಬೇಕು. ಇಲ್ಲವಾದಲ್ಲಿ ಮತ್ತೆ ಅಪರಾಧಿಗಳಿಗೆ ಸಿಗಲಿದೆ. ಅಕ್ಟೋಬರ್ ನಲ್ಲಿ ಎಲ್ಲಾ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ. ಬಳಿಕ ಪರೀಕ್ಷೆಯ ದಿನಾಂಕ ಅನೌನ್ಸ್ ಮಾಡಲಾಗುತ್ತದೆ ಎಂದಿದ್ದಾರೆ.