ನವದೆಹಲಿ: ಇಂದು ಡಿಕೆಶಿ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ದಾರೆ. ಈ ಬೆನ್ನಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಹೈಕೋರ್ಟ್ ಅಂದು ಕೇಸ್ ರದ್ದು ಮಾಡಿತ್ತು. ಆದರೆ ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.
ಈಗಲ್ ಟನ್ ರೆಸಾರ್ಟ್ ನಲ್ಲಿ ಐಟಿ ಅಧಿಕಾರಿಗಳು 2018ರಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಈ ಪ್ರಕರಣ ನಡೆಸುತ್ತಿರುವಾಗಲೇ ಡಿಕೆ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಐಟಿ ಅಧಿಕಾರಿಗಳ ವಿಚಾರಣೆಗೆ ತಡೆ ತಂದಿದ್ದರು.
ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪ್ರಕರಣವನ್ನು ವಜಾ ಮಾಡಿ, ಡಿಕೆಶಿಗೆ ಬಿಗ್ ರಿಲೀಫ್ ನೀಡಿತ್ತು. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪಿಗೆ ತಡೆ ನೀಡಿದೆ. ಇದರಿಂದ ಡಿಕೆಶಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.