Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವರ ಕೆಲಸದಲ್ಲಿ ತಪ್ಪು ಹುಡುಕುವುದಕ್ಕೆ ಆಗದೆ ಈ ರೀತಿ ಸುಳ್ಳು ಹೇಳುತ್ತಿದ್ದಾರೆ : ಭಗವಂತ್ ಮಾನ್ ಸಮರ್ಥಿಸಿಕೊಂಡ ಕೇಜ್ರಿವಾಲ್

Facebook
Twitter
Telegram
WhatsApp

ಹೊಸದಿಲ್ಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಕುಡಿದಿದ್ದಾರೆ ಎಂದು ವಿಮಾನದಿಂದ ಇಳಿಸಲಾಯಿತು ಎಂಬ ಆರೋಪಗಳ ನಡುವೆ, ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಇಂದು (ಸೆಪ್ಟೆಂಬರ್ 20, 2022) ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಕೆಲಸದಲ್ಲಿ ತಪ್ಪು ಹುಡುಕಲಾಗದೆ ಪ್ರತಿಪಕ್ಷಗಳು ಸುಳ್ಳುಗಳನ್ನು ಹರಡುತ್ತಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಗುಜರಾತಿನ ವಡೋದರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಸಿಎಂ, ಮನ್ ಸಾಹೇಬ್ ಅವರು ಕಳೆದ ಆರು ತಿಂಗಳಲ್ಲಿ ಮಾಡಿದ್ದನ್ನು ಪಂಜಾಬ್‌ನಲ್ಲಿ ಕಳೆದ 75 ವರ್ಷಗಳಲ್ಲಿ ಯಾವ ಸರ್ಕಾರವೂ ಮಾಡಿರಲಿಲ್ಲ. 75 ವರ್ಷಗಳ ನಂತರ ಪಂಜಾಬ್‌ಗೆ ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮದ ಮುಖ್ಯಮಂತ್ರಿ ಸಿಕ್ಕಿದ್ದಾರೆ ಎಂದು ಹೇಳಿದ್ದಾರೆ.

ಇದೆಲ್ಲ ಸುಳ್ಳು, ಎಲ್ಲಾ ಅಸಂಬದ್ಧ. ಪ್ರತಿಪಕ್ಷಗಳು ಮಾನ್ ಅವರನ್ನು ತಡೆಯಲು ಪ್ರಯತ್ನಿಸುತ್ತಿವೆ ಆದರೆ ಜನರು ಎಲ್ಲದನ್ನು ನೋಡುತ್ತಿದ್ದಾರೆ. ಅವರ ಕೆಲಸದಿಂದ ಅವರು ಸಂತೋಷವಾಗಿದ್ದಾರೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಿಳ್ಳೇಕೆರೆನಹಳ್ಳಿ | ಡಿಸೆಂಬರ್ 27 ರಂದು ಗೌರಸಮುದ್ರ ಮಾರಮ್ಮದೇವಿ ದೇವಸ್ಥಾನದಲ್ಲಿ 13ನೇ ವರ್ಷದ ಕಾರ್ತಿಕ ಮಹೋತ್ಸವ

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 23 : ನಗರದ ಹೊರವಲಯದ ಪಿಳ್ಳೇಕೆರೆನಹಳ್ಳಿ ಗ್ರಾಮದ ಶಕ್ತಿ ದೇವತೆಯಾದ ಶ್ರೀ ಶ್ರೀ ಶ್ರೀ ಗೌರಸಮುದ್ರದೇವಿಯ ಸನ್ನಿಧಿಯಲ್ಲಿ ಡಿಸೆಂಬರ್ 27 ರಂದು ಕಾರ್ತಿಕ ಮಹೋತ್ಸವ ನಡೆಯಲಿದೆ. ಅಂದು ಅಮ್ಮನವರಿಗೆ ಬೆಳಗ್ಗೆ

ಯಾವುದೇ ಕಾರಣಕ್ಕೂ ಕ್ಷಮಿಸಲ್ಲ : ಸಿಟಿ ರವಿ ವಿರುದ್ಧ ಸಿಡಿದೆದ್ದ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಸುವರ್ಣ ಸೌಧದಲ್ಲಿ ಸಿಟಿ ರವಿ ಅವರು ಆಡಿದ್ದ ಮಾತಿನ ಬಿಸಿ ಇನ್ನು ಹಾರಿಲ್ಲ. ಅಶ್ಲೀಲ ಪದ ಬಳಕೆಯ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೆ ಸಿಡಿದೆದ್ದಿದ್ದಾರೆ. ಆ ಸಂಬಂಧ ಎರಡು ವಿಡಿಯೋಗಳನ್ನು ಇಂದು ಹರಿಬಿಟ್ಟಿದ್ದಾರೆ.

ಚಿತ್ರದುರ್ಗ | ಪಿಳ್ಳೇಕೆರೆನಹಳ್ಳಿ ಬಳಿ ಅಂಡರ್ ಪಾಸ್ ನಿರ್ಮಿಸಿ : ಶಾಸಕ ವೀರೇಂದ್ರ ಸೂಚನೆ

  ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.23 : ಪಿಳ್ಳೇಕೆರೆನಹಳ್ಳಿ ಗ್ರಾಮದ ಬಳಿ ಸ್ಕೈವಾಕರ್ ನಿರ್ಮಿಸುವ ಬದಲಾಗಿ ಅಂಡರ್ ಪಾಸ್ ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಸೂಚಿಸಿದ್ದಾರೆ.

error: Content is protected !!