ಬೆಂಗಳೂರು: ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ ನಾಯಕರು 40% ಕಮಿಷನ್ ಆರೋಪದ ಮೇಲೆ ವಾಗ್ದಾಳಿ ನಡೆಸುತ್ತಲೇ ಬಂದಿದೆ. ಆ ಸಂಬಂಧ ವೆಬ್ಸೈಟ್ ಕೂಡ ರಿಲೀಸ್ ಮಾಡಿತ್ತು. ಇದೀಗ ನಗರದ ತುಂಬೆಲ್ಲಾ, ಬೀದಿ ಬೀದಿಯಲ್ಲಿ ಪೇ ಸಿಎಂ ಪೋಸ್ಟರ್ ಅಂಟಿಸಲಾಗಿತ್ತು. ಈ ಕೇಸ್ ಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಪಿಸಿಸಿ ಸಾಮಾಜಿಕ ಜಾಲತಾಣದ ಮಾಜಿ ಮುಖ್ಯಸ್ಥ ಬಿ ಆರ್ ನಾಯ್ಡು ಹಾಗೂ ಗಗನ್ ಯಾದವ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೈಗ್ರೌಂಡ್ ಹಾಗೂ ಸದಾಶಿವನಗರದ ಪೊಲೀಸರು ಜಂಟಿ ತನಿಖೆ ನಡೆಸುತ್ತಿದ್ದು, ದೇವಸಂದ್ರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ ಪಬ್ಲಿಕ್ ಪೋಸ್ಟ್ ಡಿಸ್ಪಿಗರ್ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ಈ ಸಂಬಂಧ ನಿನ್ನೆಯೇ ಎಫ್ಐಆರ್ ಕೂಡ ದಾಖಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಪೋಸ್ಟರ್ ಅಂಟಿಸಿದವರನ್ನು ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ.