Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಗೆ ತಕ್ಕ ಪಾಠ ಕಲಿಸಲು ಕಾರ್ಯಕರ್ತರು ಈಗಿನಿಂದಲೇ ಸಿದ್ದರಾಗಬೇಕು :  ಮಯೂರ್ ಜೈಕುಮಾರ್

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,        ಮೊ : 78998 64552

ಚಿತ್ರದುರ್ಗ, (ಸೆ.23): ಆಪರೇಷನ್ ಕಮಲದ ಮೂಲಕ ನಮ್ಮ ಶಾಸಕರುಗಳನ್ನು ಖರೀಧಿಸಿ ವಾಮ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ.ಗೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕಾಗಿರುವುದರಿಂದ ಕಾರ್ಯಕರ್ತರು ಈಗಿನಿಂದಲೆ ಸಿದ್ದರಾಗಬೇಕೆಂದು ಎ.ಐ.ಸಿ.ಸಿ.ಕಾರ್ಯದರ್ಶಿ ಹಾಗೂ ಕರ್ನಾಟಕದ ಆರು ಜಿಲ್ಲೆಗಳ ಉಸ್ತುವಾರಿ ಮಯೂರ್ ಜೈಕುಮಾರ್ ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ನಡೆದ ಭಾರತ್ ಜೋಡೋ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ತಮಿಳುನಾಡು, ಕೇರಳದಲ್ಲಿ ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. 3600 ಕಿ.ಮೀ.ಪಾದಯಾತ್ರೆಯಲ್ಲಿ ಕಾಂಗ್ರೆಸ್ ಯುವ ನೇತಾರ ರಾಹುಲ್‍ಗಾಂಧಿ ಸ್ಥಳೀಯ ಸಮಸ್ಯೆಗಳನ್ನು ಆಲಿಸಲಿದ್ದಾರೆ. 2023 ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಾದಯಾತ್ರೆಯುದ್ದಕ್ಕೂ ಜನತೆಯನ್ನು ಬಿಜೆಪಿ.ವಿರುದ್ದ ಎಚ್ಚರಿಸಲಿದ್ದಾರೆ. ಹಿರಿಯೂರು ಮೂಲಕ ಚಿತ್ರದುರ್ಗ ಜಿಲ್ಲೆಗೆ ಯಾತ್ರೆ ಆಗಮಿಸಲಿದ್ದು, ಐದು ದಿನಗಳಲ್ಲಿ ರೈತರು, ಕಾರ್ಮಿಕರು, ಮಹಿಳೆಯರು, ನಿರುದ್ಯೋಗಿಗಳು, ವಿದ್ಯಾರ್ಥಿಗಳನ್ನು ಮಾತನಾಡಿಸಿ ರಾಜ್ಯದಲ್ಲಿ ಬದಲಾವಣೆ ತರುವಂತೆ ಮನವಿ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‍ನಿಂದ ಭವ್ಯವಾಗಿ ಸ್ವಾಗತಿಸುವಂತೆ ವಿನಂತಿಸಿದರು.

ನಲವತ್ತು ಪರ್ಸೆಂಟ್ ಕಮಿಷನ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜಾತಿ ಧರ್ಮದ ಮೇಲೆ ಕೋಮುಗಲಭೆಗಳು ಹೆಚ್ಚಾಗಿದೆ. ಅಮೃತ ಮಹೋತ್ಸವ ಸ್ವಾತಂತ್ರ್ಯೋತ್ಸವದಲ್ಲಿ ಬಿಜೆಪಿ.ಸರ್ಕಾರ ಜವಾಹರಲಾಲ್‍ನೆಹರುರವರ ಫೋಟೋ ಹಾಕದೆ ಅವಮಾನ ಮಾಡಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಇತಿಹಾಸ ಕಾಂಗ್ರೆಸ್‍ಗಿದೆ. ಆರ್.ಎಸ್.ಎಸ್. ಜನಸಂಘ, ಬಿಜೆಪಿ.ಯವರು ಯಾರೂ ಬ್ರಿಟೀಷರ ವಿರುದ್ದ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಮೋತಿಲಾಲ್‍ನೆಹರು, ಜವಾಹರಲಾಲ್ ನೆಹರು ಇವರುಗಳು ಸೆರೆವಾಸ ಅನುಭವಿಸಿದ್ದಾರೆ. ಸಾರ್ವಕರ್ ಫೋಟೋ ಹಾಕಿರುವ ಬಿಜೆಪಿ. ದೇಶಕ್ಕಾಗಿ ಹೋರಾಡಿದ ಹಿರಿಯರನ್ನು ಅವಮಾನಿಸಿದೆ. ರಾಹುಲ್‍ಗಾಂಧಿ ಪಾದಯಾತ್ರೆ ಬಿಜೆಪಿ.ಗೆ ಭಯ ಹುಟ್ಟಿಸಿದೆ ಎಂದು ಹೇಳಿದರು.

ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ಆರ್.ಮಂಜುನಾಥ್ ಮಾತನಾಡಿ ರಾಹುಲ್‍ಗಾಂಧಿರವರು ತಮ್ಮ ಸ್ವಂತಕ್ಕಾಗಿ ಪಾದಯಾತ್ರೆ ಕೈಗೊಂಡಿಲ್ಲ. ದೇಶದ ಎಲ್ಲಾ ವರ್ಗದ ಜನರ ಹಿತ ಕಾಯುವುದಕ್ಕಾಗಿ 3600 ಕಿ.ಮೀ.ಪಾದಯಾತ್ರೆ ನಡೆಸುತ್ತಿದ್ದಾರೆ. ಸೆ.30 ರಂದು ರಾಜ್ಯಕ್ಕೆ ಭಾರತ್ ಜೋಡೋ ಪಾದಯಾತ್ರೆ ಆಗಮಿಸುತ್ತಿದೆ. ಹಿರಿಯೂರು ಮೂಲಕ ಜಿಲ್ಲೆಗೆ ಪಾದಯಾತ್ರೆ ಬರುತ್ತಿರುವುದರಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರುಗಳು ಪಾಲ್ಗೊಂಡು ರಾಹುಲ್‍ಗಾಂಧಿ ಎದುರು ಶಕ್ತಿ ಪ್ರದರ್ಶಿಸಬೇಕಿದೆ ಎಂದು ಸೂಚಿಸಿದರು.

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡುತ್ತ ಚುನಾವಣಾ ಪೂರ್ವದಲ್ಲಿ ದೇಶದ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ಮೋದಿ ಕಳೆದ ಎಂಟು ವರ್ಷಗಳಲ್ಲಿ ಸುಳ್ಳು ಹೇಳಿರುವುದನ್ನು ಬಿಟ್ಟರೆ ಬೇರೆ ಯಾವ ಸಾಧನೆಯೂ ಆಗಿಲ್ಲ. ಸುಳ್ಳಿನ ಲೋಕದಲ್ಲಿ ಜನರನ್ನು ತೇಲಿಸುತ್ತಿದ್ದಾರೆ. ಸತ್ಯದ ಲೋಕದಲ್ಲಿ ಜನ ತೇಲಾಡಬೇಕಾಗಿರುವುದರಿಂದ ಮುಂದಿನ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ.ಯನ್ನು ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಮಾಜಿ ಶಾಸಕ ಎ.ವಿ.ಉಮಾಪತಿ ಮಾತನಾಡಿ ಜಾತಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ.ಸರ್ಕಾರವನ್ನು ಅಧಿಕಾರದಿಂದ ದೂರವಿಡಬೇಕಾಗಿರುವುದರಿಂದ ರಾಹುಲ್‍ಗಾಂಧಿ 3600 ಕಿ.ಮೀ.ಪಾದಯಾತ್ರೆ ಕೈಗೊಂಡಿದ್ದಾರೆ. ಇದರಲ್ಲಿ ಪಕ್ಷದ ಕಾರ್ಯಕರ್ತರು, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು, ಮುಖಂಡರುಗಳು ಭಾಗವಹಿಸಬೇಕು ಎಂದು ಹೇಳಿದರು.

ಹನುಮಲಿ ಷಣ್ಮುಖಪ್ಪ ಮಾತನಾಡುತ್ತ ರಾಹುಲ್‍ಗಾಂಧಿರವರ ಭಾರತ್‍ಜೋಡೊ ಪಾದಯಾತ್ರೆ ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಕರೆದುಕೊಂಡು ಹೋಗುವ ಜವಾಬ್ದಾರಿ ಎಲ್ಲಾ ಮುಖಂಡರುಗಳ ಮೇಲಿದೆ. ಹಾಗಾಗಿ ನಾಯಕರುಗಳು ನೀಡುವ ಸೂಚನೆಗೆ ಬದ್ದರಾಗಿ ಕೆಲಸ ಮಾಡುತ್ತೇವೆಂದು ವಾಗ್ದಾನ ಮಾಡಿದರು.
ಜೆಜೆ ಹಟ್ಟಿ ತಿಪ್ಪೇಸ್ವಾಮಿ ಮಾತನಾಡಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಎಂಟು ಲಕ್ಷ ಮತಗಳಿವೆ. ಅದರಲ್ಲಿ ಐದು ಲಕ್ಷ ಲೆಫ್ಟ್‍ಗಳಿದ್ದು, ಐದುನೂರು ತಪ್ಪಡೆ, ಐದು ಸಾವಿರ ಜನರನ್ನು ಭಾರತ್ ಜೋಡೋ ಪಾದಯಾತ್ರೆಗೆ ಕರೆತರುತ್ತೇನೆಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡುತ್ತ ಕರ್ನಾಟಕದಲ್ಲಿ ಐದು ನೂರು ಕಿ.ಮೀ. ಹಾಗೂ ಜಿಲ್ಲೆಯಲ್ಲಿ ಐದು ದಿನಗಳ ಕಾಲ 125 ಕಿ.ಮೀ.ನಷ್ಟು ಪಾದಯಾತ್ರೆ ನಡೆಯಲಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ರಾಹುಲ್‍ಗಾಂಧಿರವರ ಜೊತೆ ಫೋಟೋ ಶೂಟ್‍ಗೆ ಅವಕಾಶ ಮಾಡಿಕೊಡುವಂತೆ ಮಯೂರ್ ಜೈಕುಮಾರ್‍ರವರಲ್ಲಿ ಕೋರಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಲಸ್ವಾಮಿ ಮಾತನಾಡಿದರು.
ಕೆ.ಪಿ.ಸಿ.ಸಿ.ಉಸ್ತುವಾರಿ ರಾಘವೇಂದ್ರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಬಿ.ಟಿ.ಜಗದೀಶ್, ಉಪಾಧ್ಯಕ್ಷ ಡಿ.ಟಿ.ವೆಂಕಟೇಶ್, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಕಾಂಗ್ರೆಸ್ ಮಾಜಿ ಅಧ್ಯಕ್ಷ ಫಾತ್ಯರಾಜನ್, ಬಾಲಕೃಷ್ಣಸ್ವಾಮಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಮಮತ, ಕೃಷ್ಣಪ್ಪ ಇವರುಗಳು ವೇದಿಕೆಯಲ್ಲಿದ್ದರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ರೀಮತಿ ಗೀತನಂದಿನಿಗೌಡ, ರುದ್ರಾಣಿ, ಆರತಿ ಮಹಡಿ ಶಿವಮೂರ್ತಿ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

error: Content is protected !!