ಮೈಸೂರು: ನಾಳೆ ದಸರಾ ಉತ್ಸವ ಉದ್ಘಾಟನೆ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿದೆ. ವೇದಿಕೆ ಹಿಂಭಾಗದಲ್ಲಿ ಎಲ್ಇಡಿ ಪರದೆ ಅಳವಡಿಕೆ ಮಾಡಲಾಗಿದೆ. ವೇದಿಕೆ ಮೇಲೆ ರಾಷ್ಟ್ರಪತಿ, ರಾಜ್ಯಪಾಲರು, ಸಿಎಂ ಸೇರಿ 13 ಮಂದಿಗೆ ವೇದಿಕೆ ಮೇಲೆ ಕೂರಲು ಅವಕಾಶವಿರುತ್ತದೆ. ಇನ್ನು ದಸರಾ ಉದ್ಘಾಟನೆ ವೀಕ್ಷಣೆಗೆ ಸಾರ್ವಜನಿಕರಿಗೂ ಅವಕಾಶ ಸಿಗಲಿದೆ.
ದಸರಾ ಉತ್ಸವ ಹಿನ್ನೆಲೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಕುಟುಂಬ ಸಮೇತ ಮೈಸೂರಿಗೆ ಆಗಮಿಸಲಿದ್ದಾರೆ. ಇದು ಎರಡನೇ ಬಾರಿಗೆ ಸಿಎಂ ಬೊಮ್ಮಾಯಿ ಅವರು ಮೈಸೂರು ದಸರಾ ಉತ್ಸವದಲ್ಲಿ ಭಾಗಿಯಾಗುತ್ತಿದ್ದಾರೆ.
ಇನ್ನು ಮೈಸೂರ ದಸರಾವನ್ನು ಮೊದಲ ಬಾರಿಗೆ ರಾಷ್ಟ್ರಪತಿಗಳು ಉದ್ಘಾಟನೆ ಮಾಡಲಿದ್ದಾರೆ. ಹೀಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರನ್ನು ಸ್ವಾಗತಿಸಲಿದ್ದಾರೆ. ಇಂದು ಮತ್ತು ನಾಳೆ ಸಿಎಂ ಬೊಮ್ಮಾಯಿ ಅವರು ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.