ಬೆಂಗಳೂರು: ಪಿಎಫ್ಐ ಸಂಘಟನೆಯನ್ನು ಕೇಂದ್ರ ಸರ್ಕಾರ 5 ವರ್ಷಗಳ ಕಾಲ ಬ್ಯಾನ್ ಮಾಡಿದೆ. ಈ ಬಗ್ಗೆ ಕಾಂಗ್ರೆಸ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ. PFI ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ಬರೆದುಕೊಂಡಿದೆ.
ಇನ್ನು ಈ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ, ಆರ್ಎಸ್ಎಸ್ ಅವರು ಕೂಡ ಸಮಾಜದ ಶಾಂತಿ ಹಾಳು ಮಾಡುತ್ತಿದ್ದಾರ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು. ಪಿಎಫ್ಐ ಸಂಘಟನೆಯನ್ನು ನಾವೇ ಬ್ಯಾನ್ ಮಾಡಬೇಕು ಎಂದುಕೊಂಡಿದ್ದೆವು. ಸಮಾಜದಲ್ಲಿ ಯಾರು ಕಾನೂನು ಬಾಹಿರವಾಗಿ ನಡೆದುಕೊಳ್ಳುತ್ತಾರೋ, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ನಮ್ಮದೇನು ವಿರೋಧವಿಲ್ಲ ಎಂದಿದ್ದಾರೆ.
ಇನ್ನು ಪಿಎಫ್ಐ ಬ್ಯಾನ್ ಮಾಡಿರುವುದು ನಾವೂ ಸ್ವಾಗತಿಸುತ್ತೇವೆ. ಅದೇ ರೀತಿ ಆರ್ಎಸ್ಎಸ್ ನವರು ಕೂಡ ಸಮಾಜದ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಸಂಘಟನೆ ಆಗಿರಲಿ. ಅದು ಸಮಾಜದ ಸಾಮರಸ್ಯವನ್ನು ಹಾಳು ಮಾಡಿದರೆ, ದ್ವೇಷದ ರಾಜಕಾರಣ ಬಿತ್ತಿದರೆ, ಅಂಥಹ ಸಂಘಟನೆಯನ್ನು ಬ್ಯಾನ್ ಮಾಡಬೇಕು ಎಂದಿದ್ದಾರೆ.