ನವದೆಹಲಿ: ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ದಿನ ಸಮೀಪಿಸುತ್ತಿರುವಾಗಲೇ ಸ್ಪರ್ಧಿಗಳ ನಿರೀಕ್ಷೆಯ ಪಟ್ಟಿ ಬೆಳೆಯುತ್ತಾ ಹೋಗುತ್ತಿದೆ. ಗೆಹ್ಲೋಟ್ ಸಿಎಂ ಸ್ಥಾನ ಬಿಟ್ಟುಕೊಡಲ್ಲ ಎಂದಾಗ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಸೂಚಿಸಲಾಗಿತ್ತು. ಇದೀಗ ಕಾಂಗ್ರೆಸ್ ನಾಯಕರ ವಲಯದಲ್ಲಿ ಪ್ರಿಯಾಂಕ ಖರ್ಗೆ ಹೆಸರು ಕೂಡ ಕೇಳಿಬರುತ್ತಿದೆ.
ಅಧ್ಯಕ್ಷರ ಸ್ಥಾನಕ್ಕೆ ಪ್ರಿಯಾಂಕ ಗಾಂಧಿ ಹೆಸರನ್ನು ಸೂಚಿಸಿದ್ದು, ಅಸ್ಸಾಂ ಕಾಂಗ್ರೆಸ್ ಸಂಸದ ಅಬ್ದುಲ್ ಖಲೀಕ್. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಗಾಂಧಿ ಕುಟುಂಬದವರ ಸ್ಪರ್ಧೆ ಬೇಡ ಎಂದು ಹೇಳಲಾಗಿದೆ. ಆದರೆ ಪ್ರಿಯಾಂಕ ಗಾಂಧಿ ಅವರಿಗೆ ಮದುವೆಯಾಗಿದ್ದು, ಅವರು ಗಾಂಧಿ ಕುಟುಂಬಕ್ಕೆ ಸಂಬಂಧಿಸಿಲ್ಲ ಎಂದು ಖಲೀಕ್ ಹೇಳಿದ್ದಾರೆ.
ಹೀಗಾಗಿ ಪ್ರಿಯಾಂಕ ಗಾಂಧಿ ಅವರನ್ನು ಅಧ್ಯಕ್ಷೀಯ ಸ್ಥಾನಕ್ಕೆ ಹೆಸರು ಸೂಚಿಸಲಾಗಿದೆ. ಶಶಿ ತರೂರ್, ದಿಗ್ವಿಜಯ್ ಸಿಂಗ್ ನಡುವೆ ಇವರು ಸ್ಪರ್ಧಿಸುತ್ತಾರಾ ನೋಡಬೇಕಿದೆ. ಆದರೆ ಆ ಬಗ್ಗೆ ಇನ್ನು ಅಧಿಕೃತ ಮಾಹಿತಿ ಇಲ್ಲ.