ಅಕ್ಟೋಬರ್ 17ರಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ರಂಗೇರಿದೆ. ಶಶಿ ತರೂರ್, ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ ಹೀಗೆ ಹಲವರ ಹೆಸರು ಚಾಲ್ತಿಯಲ್ಲಿದೆ. ಅದರಲ್ಲಿ ಇದೀಗ ಮಲ್ಲಿಕಾರ್ಜುನ ಖರ್ಗೆ ಅವರ ಹೇಸರೇ ಫೈನಲ್ ಆಗಿದ್ದು, ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ಯಾವಾಗ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪ ಮಾಡಿ, ಇವರೇ ಸ್ಪರ್ಧಿಸುತ್ತಾರೆ ಎಂದು ಹೇಳೀದರೋ, ದಿಗ್ವಿಜಯ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಗಾಂಧಿಯೇತರರನ್ನು ಈ ಬಾರಿ ಸ್ಪರ್ಧೆಗೆ ನಿಲ್ಲಿಸಬೇಕು ಎಂಬ ತೀರ್ಮಾನದಿಂದ ಸ್ಪರ್ಧಿಗಳ ವಿಚಾರದಲ್ಲಿ ಇಷ್ಟೆಲ್ಲ ಗೊಂದಲ, ಇಷ್ಟೆಲ್ಲಾ ಪೈಪೋಟಿ ನಡೆದಿದೆ. ಸುಮಾರು 25 ವರ್ಷಗಳ ಬಳಿಕ ಗಾಂಧಿಯೇತರ ಅಧ್ಯಕ್ಷರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ.
ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, 19ರಂದು ಫಲಿತಾಂಶ ಹೊರಬೀಳಲಿದೆ. ಇಂದೇ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿರುವ ಕಾರಣ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ನಂತರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.