Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಅಕ್ಟೋಬರ್ 4 ರಿಂದ 6 ರವರೆಗೂ ಶರಣ ಸಂಸ್ಕೃತಿ ಉತ್ಸವ : ಡಾ. ಬಸವಕುಮಾರ ಸ್ವಾಮೀಜಿ

Facebook
Twitter
Telegram
WhatsApp

 

 

ಚಿತ್ರದುರ್ಗ, (ಅ. 01) : ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಅಕ್ಟೋಬರ್ 4 ರಿಂದ 6 ರವರೆಗೂ ಶರಣ ಸಂಸ್ಕೃತಿ ಉತ್ಸವ ನೆರವೇರಲಿದೆ ಎಂದು ಉತ್ಸವ ಸಮಿತಿಯ ಗೌರವಾಧ್ಯಕ್ಷರಾದ ಡಾ. ಬಸವಕುಮಾರ ಸ್ವಾಮೀಜಿ ಅವರು ನಡೆಯಲಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಶ್ರೀಮಠದಲ್ಲಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿ ಮಾಹಿತಿ ನೀಡಿದರು.

ದಿ. 4-10-22ರಂದು ಬೆಳಗ್ಗೆ 8.00ಕ್ಕೆ ಕನಕಪುರ ಶ್ರೀ ಮರಳೇಗವಿಮಠದ ಡಾ. ಮುಮ್ಮಡಿ ಶಿವರುದ್ರ ಸ್ವಾಮಿಗಳು ಬಸವತತ್ವ ಧ್ವಜಾರೋಹಣ ನೆರವೇರಿಸುವರು.

ಸಂಜೆ 6.30ಕ್ಕೆ ಶರಣ ಸಂಸ್ಕೃತಿ ಉತ್ಸವ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಇಳಕಲ್‍ನ ವಿಜಯಮಹಾಂತೇಶ್ವರ ಮಠದ ಶ್ರೀ ಗುರುಮಹಾಂತ ಸ್ವಾಮಿಗಳು, ಮಾದಾರಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳು, ರಾವಂದೂರು ಮುರುಘಾಮಠದ ಶ್ರೀ ಮೋಕ್ಷಪತಿ ಸ್ವಾಮಿಗಳು ಸಮ್ಮುಖ ವಹಿಸುವರು. ಖ್ಯಾತ ಸಂಶೋಧಕರಾದ ಡಾ. ಬಿ. ರಾಜಶೇಖರಪ್ಪನವರು ಶತಮಾನಗಳಿಂದ ಸಾಗಿಬಂದ ಶೂನ್ಯಪೀಠ ಪರಂಪರೆ ವಿಷಯ ಕುರಿತು ಉಪನ್ಯಾಸ ನೀಡುವರು.

ದಿ. 5-10-2022ರಂದು ಬೆಳಗ್ಗೆ 10.30ಗಂಟೆಗೆ ನಡೆಯುವ ಸಾಮೂಹಿಕ ಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಡಿವಾಳ ಗುರುಪೀಠದ ಶ್ರೀ ಬಸವಮಾಚಿದೇವ ಸ್ವಾಮಿಗಳು ಸಮ್ಮುಖ ವಹಿಸುವರು. ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮಿಗಳು, ಚಿದರವಳ್ಳಿ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಉಪಸ್ಥಿತಿರಿರುವರು.

ಸಂಜೆ 5.00 ಗಂಟೆಗೆ ಚಿತ್ರದುರ್ಗ ಕೋಟೆಯಲ್ಲಿರುವ ಮುರುಘಾಮಠದಲ್ಲಿ ಚಿತ್ರದುರ್ಗ ರಾಜವಂಶಸ್ಥರಿಂದ ಶ್ರೀಗಳಿಗೆ ಭಕ್ತಿ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಭೋವಿ ಗುರುಪೀಠದ ಶ್ರೀ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು ಸಮ್ಮುಖ ವಹಿಸಲಿದ್ದು, ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಗುರುಮುರುಘರಾಜೇಂದ್ರ ಸ್ವಾಮಿಗಳು ಉಪಸ್ಥಿತರಿರುವರು.

ಬಸವತತ್ವ-ಸಾರ್ವಕಾಲಿಕ ಪ್ರಸ್ತುತತೆ ವಿಷಯ ಕುರಿತು ಬೆಂಗಳೂರಿನ ಡಾ. ಬೈರಮಂಗಲ ರಾಮೇಗೌಡ ಉಪನ್ಯಾಸ ನೀಡಲಿದ್ದಾರೆ. ಖ್ಯಾತ ಗಾಯಕ ಅಂಬಯ್ಯನೂಲಿ, ರಾಯಚೂರು ಅವರಿಂದ ವಚನ ಸಂಗೀತವಿರುತ್ತದೆ.

ದಿ. 6-10-22ರಂದು ಬೆಳಗ್ಗೆ 10.30ಗಂಟೆಗೆ ಶೂನ್ಯಪೀಠ ಪರಂಪರೆಯ ಶ್ರೀ ಮುರಿಗಾ ಶಾಂತವೀರ ಸ್ವಾಮಿಗಳ ಭಾವಚಿತ್ರದೊಂದಿಗೆ ಪೀಠಾರೋಹಣ, ನಂತರ ಶ್ರೀಮಠದ ಆವರಣದಲ್ಲಿ ಅಲ್ಲಮಪ್ರಭು, ಬಸವಣ್ಣನವರ ಭಾವಚಿತ್ರ ಮತ್ತು ವಚನಕಟ್ಟುಗಳ ಪಲ್ಲಕ್ಕಿ ಉತ್ಸವ ನಡೆಯಲಿದೆ.

ಸಂಜೆ 6.30ಕ್ಕೆ ಶರಣ ಸಂಸ್ಕೃತಿ ಉತ್ಸವ ಸಮಾರೋಪ ನಡೆಯಲಿದ್ದು, ಹೊಸದುರ್ಗ ಕುಂಚಿಟಿಗ ಗುರುಪೀಠದ ಡಾ. ಶಾಂತವೀರ ಸ್ವಾಮಿಗಳು ಸಮ್ಮುಖ ವಹಿಸುವರು.

ಗುರುಮಠಕಲ್‍ನ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು, ತಿಪಟೂರು ಶ್ರೀ ಷಡಕ್ಷರಮಠದ ಶ್ರೀ ರುದ್ರಮುನಿ ಸ್ವಾಮಿಗಳು ಉಪಸ್ಥಿತರಿರುವರು. ಪ್ರಾಚೀನ ಮುರುಘಾ ಪೀಠಾಧೀಶರ ಸಾಹಿತ್ಯ ವಿಷಯ ಕುರಿತು ಸಾಹಿತಿ ಡಾ. ಬಿ.ನಂಜುಂಡಸ್ವಾಮಿ ಚಿಂತನೆ ನೀಡುವರು. ಅಂತಾರಾಷ್ಟ್ರೀಯ ಗಾಯಕ ಮೃತ್ಯುಂಜಯ ಶೆಟ್ಟರ್‍ರಿಂದ ವಚನ ಸಂಗೀತವಿರುತ್ತದೆ. ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತರುದ್ರೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳಲ್ಲಿ ಶ್ರೀಮಠದ ಶಾಖಾಮಠಗಳ ಪೂಜ್ಯರು ಹಾಗು ವಿವಿಧ ಸಮಾಜದ ಮಠಾಧೀಶರುಗಳು ಹಾಗೂ ಹರಗುರುಚರಮೂರ್ತಿಗಳು ಭಾಗವಹಿಸುವರು.

ಗೋಷ್ಠಿಯಲ್ಲಿ ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತರುದ್ರೇಶ್ವರ ಸ್ವಾಮಿಗಳು,
ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು, ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಗುರುಮುರುಘರಾಜೇಂದ್ರ ಸ್ವಾಮಿಗಳು,
ಹಾವೇರಿ ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮಿಗಳು, ನಿಪ್ಪಾಣಿ ವಿರಕ್ತಮಠದ ಶ್ರೀ ಬಸವಮಲ್ಲಿಕಾರ್ಜುನ ಸ್ವಾಮಿಗಳು, ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮಿಗಳು, ಗುರುಮಠಕಲ್‍ನ ಖಾಸಾಮುರುಘಾಮಠದ ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮಿಗಳು,
ತಂಗನಹಳ್ಳಿ ಕಾಶಿಅನ್ನಪೂಣೇಶ್ವರಿ ಮಠದ ಶ್ರೀ ಬಸವಮಹಾಲಿಂಗ ಸ್ವಾಮಿಗಳು, ಹೊಳವನಹಳ್ಳಿ ಮಠದ ಶ್ರೀ ಬಸವಕಿರಣ ಸ್ವಾಮಿಗಳು, ಮೇದಾರ ಗುರುಪೀಠದ ಶ್ರೀ ಇಮ್ಮಡಿ ಬಸವಕೇತೇಶ್ವರ ಸ್ವಾಮಿಗಳು, ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಎಸ್. ಲಿಂಗಮೂರ್ತಿ, ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎಸ್.ಬಿ.ವಸ್ತ್ರದಮಠ್, ಹೆಚ್.ಆನಂದಪ್ಪ, ಎಸ್.ವಿ.ನಾಗರಾಜಪ್ಪ ಸಿದ್ದಾಪುರ, ಪಟೇಲ್ ಶಿವಕುಮಾರ್, ಡಿ.ಎಸ್. ಮಲ್ಲಿಕಾರ್ಜುನ್, ಕೆಇಬಿ ಷಣ್ಮುಖಪ್ಪ, ಜಿತೇಂದ್ರ, ಮರುಳಾರಾದ್ಯ, ವೀರೇಶ್, ಡಾ. ಬಿ. ರಾಜಶೇಖರಪ್ಪ, ದಯಾನಂದ್ ಮೊದಲಾದವರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!