ಸುದ್ದಿಒನ್ ನ್ಯೂಸ್ ಡೆಸ್ಕ್
ಕಾನ್ಪುರ : ಶನಿವಾರ ರಾತ್ರಿ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದು ಕನಿಷ್ಠ 26 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. (ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು) 20 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
50 ಜನರಿದ್ದ ಟ್ರ್ಯಾಕ್ಟರ್ ಉನ್ನಾವೊದ ಚಂದ್ರಿಕಾ ದೇವಿ ದೇವಸ್ಥಾನದಿಂದ ವಾಪಸಾಗುತ್ತಿದ್ದಾಗ ಕಾನ್ಪುರದ ಘಟಂಪುರ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ (PMO) ತಿಳಿಸಿದೆ.
An ex-gratia of Rs. 2 lakh from PMNRF would be paid to the next of kin of each of the deceased. The injured would be given Rs. 50,000: PM @narendramodi
— PMO India (@PMOIndia) October 1, 2022
ಕೂಡಲೇ ಸ್ಥಳಕ್ಕೆ ತರಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಕಾನ್ಪುರ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತವು ಹೃದಯ ವಿದ್ರಾವಕವಾಗಿದೆ. ಜಿಲ್ಲಾಧಿಕಾರಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಹೋಗಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಬೇಕು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಯೋಗಿ ಟ್ವೀಟ್ ಮಾಡಿದ್ದಾರೆ.