Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಕರ ನೇಮಕಾತಿ : ಚಿತ್ರದುರ್ಗದಲ್ಲಿ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನಾ ವೇಳಾ ಪಟ್ಟಿ ಪ್ರಕಟ

Facebook
Twitter
Telegram
WhatsApp

 

ಚಿತ್ರದುರ್ಗ,(ಅಕ್ಟೋಬರ್ 03) : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ-2022ರ ಸಂಬಂಧ 1:2 ಅನುಪಾತದ ತಾತ್ಕಾಲಿಕ ಪರಿಶೀಲನಾ ಪಟ್ಟಿ ಪ್ರಕಟಿಸಲಾಗಿದೆ.

ಪಟ್ಟಿಯಲ್ಲಿನ ಅಭ್ಯರ್ಥಿಗಳು ಅಕ್ಟೋಬರ್ 06 ರಿಂದ ಅಕ್ಟೋಬರ್ 12 ರವರೆಗೆ ಕಛೇರಿಯ ನಾಮಫಲಕದಲ್ಲಿ ಪ್ರಕಟಿಸಲಾದ ವೇಳಪಟ್ಟಿಯಂತೆ ಸಂಬಂಧಿಸಿದ ಎಲ್ಲಾ ಮೂಲ ದಾಖಲೆಗಳು ಹಾಗೂ 2 ಜೆರಾಕ್ಸ್ ಪ್ರತಿಗಳನ್ನು ಉಪನಿರ್ದೆಶಕರ ಕಛೇರಿಯಲ್ಲಿ ಹಾಜರುಪಡಿಸಬೇಕು.

ಅಕ್ಟೋಬರ್ 06ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಆಂಗ್ಲ ವಿಷಯಕ್ಕೆ ಸಂಬಂಧಿಸಿದಂತೆ ಕ್ರಮ ಸಂಖ್ಯೆ 01 ರಿಂದ 82 ಹಾಗೂ ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದಂತೆ ಕ್ರಮಸಂಖ್ಯೆ 1ರಿಂದ 20 ರವರೆಗೆ ದಾಖಲಾತಿ ಪರಿಶೀಲನೆ ನಡೆಯಲಿದೆ.

ಅಕ್ಟೋಬರ್ 7ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದಂತೆ ಕ್ರಮಸಂಖ್ಯೆ 21ರಿಂದ 52 ಹಾಗೂ ಜೀವಶಾಸ್ತ್ರ ವಿಜ್ಞಾನಕ್ಕೆ ಸಂಬಂಧಿಸಿದಂತೆ ಕ್ರಮಸಂಖ್ಯೆ 1ರಿಂದ 63 ಪರಿಶೀಲನೆ ನಡೆಯಲಿದೆ.

ಅಕ್ಟೋಬರ್ 10ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗಣಿತ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಕ್ರಮ ಸಂಖ್ಯೆ 1 ರಿಂದ 100 ದಾಖಲಾತಿ ಪರಿಶೀಲನೆ ನಡೆಯಲಿದೆ.

ಅಕ್ಟೋಬರ್ 11ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗಣಿತ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಕ್ರಮ ಸಂಖ್ಯೆ 101 ರಿಂದ 200 ರವರೆಗೆ ದಾಖಲಾತಿ ಪರಿಶೀಲನೆ ನಡೆಯಲಿದೆ.

ಅಕ್ಟೋಬರ್ 12ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗಣಿತ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಕ್ರಮ ಸಂಖ್ಯೆ 201 ರಿಂದ 272ರ ವರೆಗೆ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ಸಹಾಯವಾಣಿ ಸಂಖ್ಯೆ ಉಪನಿರ್ದೇಶಕರಾದ ಕೆ.ರವಿಶಂಕರರೆಡ್ಡಿ-9448999336, ನೇಮಕಾತಿ ನೋಡಲ್ ಅಧಿಕಾರಿ ಸಿ.ಎಂ ತಿಪ್ಪೇಸ್ವಾಮಿ 7760604054, ಪತ್ರಾಂಕಿತ ಸಹಾಯಕರಾದ ಬಿ.ವಿ.ಪ್ರಸಾದ ಬಾಬು-9448664370, ಆಡಳಿತ ಶಾಖೆ ಅಧಿಕ್ಷಕರಾದ ರುಕ್ಸಾನಾ ಪರ್ವೀನ್-9481161868, ನೇಮಕಾತಿ ವಿಷಯ ನಿರ್ವಾಹಕ ಪ್ರಥಮ ದರ್ಜೆ ಸಹಾಯಕ ಪಿ.ನಟರಾಜ -8970835155, ಕಛೇರಿ ದೂರವಾಣಿ ಸಂಖ್ಯೆ-08194-222259, [email protected] ಗೆ ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!