ಬೆಂಗಳೂರು: ವಿಧಾನಸಭಾ ಎಲೆಕ್ಷನ್ ಹತ್ತಿರವಾಗುತ್ತಿದ್ದಂತೆ ಜನರ ಮನಸ್ಸನ್ನು ಗೆಲ್ಲುವುದಕ್ಕೆ ಪಕ್ಷಗಳು ಸಾಕಷ್ಟು ತಯಾರಿ ನಡೆಸಿಕೊಳ್ಳುತ್ತಿವೆ. ಜನರ ಬಳಿಗೆ ಹೋಗುವುದಕ್ಕೆ ನಾನಾ ಕಾರ್ಯಕ್ರಮಗಳನ್ನು ಮಾಡುತ್ತಿವೆ. ಸದ್ಯ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ಮೂಲಕ ತನ್ನ ಶಕ್ತಿ ಸಾಮರ್ಥ್ಯವನ್ನು ತೋರಿಸುತ್ತಿದೆ. ರಾಹುಲ್ ಗಾಂಧಿ ಇನ್ನು ಕೂಡ ಪಾದಯಾತ್ರೆಯನ್ನು ಮುಂದುವರೆಸಿದ್ದಾರೆ. ಇನ್ನು ಸಿದ್ದರಾಮೋತ್ಸವಕ್ಕೆ ಲಕ್ಷಾಂತರ ಮಂದಿ ಸೇರಿದ್ದರು. ಇದೆಲ್ಲವು ಕಾಂಗ್ರೆಸ್ ಗೆ ಪ್ಲಸ್ ಪಾಯಿಂಟ್ ಆಗುವುದರಲ್ಲಿ ಸಂದೇಹವಿಲ್ಲ.
ಆದರೆ ಇದೀಗ ಬಿಜೆಪಿ, ಸಿದ್ದರಾಮೋತ್ಸವ ಹಾಗೂ ಭಾರತ್ ಜೋಡೋ ಯಾತ್ರೆಗೆ ವಿರುದ್ಧವಾಗಿ ದೊಡ್ಡ ಅಸ್ತ್ರವನ್ನೇ ಬಿಡುವುದಕ್ಕೆ ಸಿದ್ದತೆ ನಡೆಸಿದೆ. ಅದು ಬಿಜೆಪಿ ನಾಯಕರನ್ನು ರಾಜ್ಯಕ್ಕೆ ಕರೆಸಿ ಪ್ರಚಾರ ನಡೆಸುವ ಪ್ಲಾನ್ ನಲ್ಲಿದೆ. ಇದೇ ತಿಂಗಳಲ್ಲಿ ರಾಜ್ಯಕ್ಕೆ ರಾಷ್ಟ್ರೀಯ ನಾಯಕರ ಆಗಮನವಾಗಲಿದೆ ಎನ್ನಲಾಗಿದೆ.
ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ. ಅಕ್ಟೋಬರ್ ಅಂತ್ಯದ ವೇಳೆಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಕೆಂಪೇಗೌಡ ಟರ್ಮಿನಲ್2 ಹಾಗೂ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲಿದ್ದಾರೆ.
ಇನ್ನು ದಾವಣೆಗೆರೆಯಲ್ಲಿ ಸಂತ ಸೇವಾಲಾಲ್, ಕಲಬುರಗಿಯಲ್ಲಿ ಓಬಿಸಿ ಮೋರ್ಚಾ ಸಮಾವೇಶ, ಮೈಸೂರಿನಲ್ಲಿ ಎಸ್ಸಿ ಸಮಾವೇಶಕ್ಕೆ ಅಮಿತ್ ಶಾ ಬರಲಿದ್ದಾರೆ. ಇನ್ನು ಕುಂಭಮೇಳಕ್ಕೆ ಯೋಗಿ ಆದಿತ್ಯನಾಥ್ ಅವರನ್ನು ಕರೆಸಲಿದ್ದಾರೆ. ಈ ಎಲ್ಲದರ ಪ್ರಚಾರದ ಹಿಂದೆ ಮುಂದಿನ ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಿದ್ದಾರೆ.