ಮದುವೆ ಬಸ್ ಕಂದಕಕ್ಕೆ ಉರುಳಿ 25 ಮಂದಿ ಸಾವು

 

ಡೆಹ್ರಾಡೂನ್: (ಅ.05) : ಕಳೆದ ರಾತ್ರಿ ಉತ್ತರಾಖಂಡದ ಪೌರಿ ಗರ್ವಾಲ್‌ನಲ್ಲಿ 40 ಕ್ಕೂ ಹೆಚ್ಚು ಜನರಿದ್ದ ಮದುವೆ ದಿಬ್ಬಣಕ್ಕೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಪರಿಣಾಮ 25 ಜನರು ಸಾವನ್ನಪ್ಪಿದ್ದಾರೆ.

ಸಿಮ್ಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಪೊಲೀಸರು ರಾತ್ರಿಯ ಕಾರ್ಯಾಚರಣೆಯಲ್ಲಿ 21 ಪ್ರಯಾಣಿಕರನ್ನು ರಕ್ಷಿಸಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ಖಾಸಗಿ  ತಿಳಿಸಿದ್ದಾರೆ.

ರಾಜ್ಯ ಪೊಲೀಸ್ ಮುಖ್ಯಸ್ಥರು ರಾತ್ರಿ ನಡೆಸಿದ ಕಾರ್ಯಾಚರಣೆಯ ದೃಶ್ಯಗಳನ್ನು ಟ್ವೀಟ್ ಮಾಡಿದ್ದಾರೆ.ಇದರಲ್ಲಿ ರಕ್ಷಣಾ ತಂಡಗಳು ಗಾಯಗೊಂಡ ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯುವುದನ್ನು ಕಾಣಬಹುದಾಗಿದೆ.

ದುರಂತದಲ್ಲಿ ಸಾವಿಗೀಡಾದವರಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *