ಉಡುಪಿ: ಕರ್ನಾಟಕ ಸರ್ಕಾರದಲ್ಲಿ ಕೆಲಸ ತೆಗೆದುಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಇಲ್ಲಿದೆ ಸುವರ್ಣವಕಾಶ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಟಣ ಸೊಸೈಟಿ ಉಡುಪಿಯೂ ಖಾಲಿ ಇರುವ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದೆ. ನಾಳೆಯೇ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್6 ಎಂದರೆ ನಾಳೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಉಡುಪಿಯಲ್ಲಿ 1 ಅಕೌಂಟೆಂಟ್ ಪೋಸ್ಟ್ ಖಾಲಿ ಇದೆ. ಸಂಬಳ: ರೂ.15697 ಪ್ರತಿ ತಿಂಗಳು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ: DHFWS ಉಡುಪಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ವಾಣಿಜ್ಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಅನುಭವದ ವಿವರಗಳು: ಅಭ್ಯರ್ಥಿಗಳು ಆರೋಗ್ಯ ಇಲಾಖೆಯ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಡಬಲ್ ಎಂಟ್ರಿ ಸಿಸ್ಟಮ್ನಲ್ಲಿ ಖಾತೆಗಳ ನಿರ್ವಹಣೆಯಲ್ಲಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು.