ಮಂಡ್ಯ (ಅಕ್ಟೋಬರ್. 6) : ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ಪುನರಾರಂಭಗೊಂಡಿದೆ. ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಪುತ್ರ ರಾಹುಲ್ ಗಾಂಧಿಯವರೊಂದಿಗೆ ಹೆಜ್ಜೆ ಹಾಕಿದರು.
#WATCH | Karnataka: Congress interim president Sonia Gandhi joins Congress MP Rahul Gandhi and other party leaders and workers during 'Bharat Jodo Yatra' in Mandya district pic.twitter.com/iSXNW8zciV
— ANI (@ANI) October 6, 2022
ಪಾಂಡವಪುರ ತಾಲೂಕಿನ ಜಕನಹಳ್ಳಿಯಿಂದ ಬೆಳಗ್ಗೆ 6.30ಕ್ಕೆ ಪುನರಾರಂಭಗೊಂಡ ಪಾದಯಾತ್ರೆ ಸಂಜೆ 7ಕ್ಕೆ ನಾಗಮಂಗಲ ತಾಲೂಕಿನಲ್ಲಿ ಕೊನೆಗೊಳ್ಳಲಿದೆ.
ಸೋನಿಯಾ ಗಾಂಧಿ ಅವರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವುದು ಪಕ್ಷಕ್ಕೆ ಹೆಮ್ಮೆಯ ಸಂಗತಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ವಿಜಯದಶಮಿ ನಂತರ ಕರ್ನಾಟಕದಲ್ಲಿ ವಿಜಯೋತ್ಸವ ನಡೆಯಲಿದೆ. ಸೋನಿಯಾ ಗಾಂಧಿ ಅವರು ಕರ್ನಾಟಕದಲ್ಲಿ ಪಾದಯಾತ್ರೆ ಮಾಡುತ್ತಿರುವುದು ನಮಗೆ ಹೆಮ್ಮೆ, ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ ಮತ್ತು ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಸೋನಿಯಾ ಗಾಂಧಿ ಅವರೊಂದಿಗೆ ಶಾಸಕರಾದ ಅಂಜಲಿ ನಿಂಬಾಳ್ಕರ್, ರೂಪಕಲಾ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಪಾದಯಾತ್ರೆ ಬಳಿಕ ಬ್ರಹ್ಮದೇವರಹಳ್ಳಿ ಗ್ರಾಮದಲ್ಲಿ ಸಭೆ ನಡೆಯಲಿದೆ.
ಕರ್ನಾಟಕದಲ್ಲಿ 21 ದಿನಗಳ ಕಾಲ 511 ಕಿ.ಮೀ. ಯಾತ್ರೆಯು ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಂಚರಿಸಲಿದೆ.