ಮಂಡ್ಯ: ರಾಹುಲ್ ಗಾಂಧಿ ಐಕ್ಯತಾ ಯಾತ್ರೆ ಸದ್ಯ ಮಂಡ್ಯದಲ್ಲಿ ಸಾಗುತ್ತಾ ಇದೆ. ನಾಳೆಯೂ ರಾಜ್ಯದಲ್ಲಿಯೇ ಮುಂದುವರೆಯಲಿದೆ. ಇದರ ನಡುವೆಯೇ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಡಿಕೆ ಬ್ರದರ್ಸ್ ಗೂ ನೋಟೀಸ್ ನೀಡಿದ್ದಾರೆ. ನಾಳೆಯೇ ವಿಚಾರಣೆ ಹಾಜರಾಗಬೇಕು ಎಂಬುದನ್ನು ಸೂಚಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಡಿ ಕೆ ಶಿವಕುಮಾರ್, ನಾಳೆ ಇಡಿ ವಿಚಾರಣೆಗೆ ಹಾಜರಾಗುತ್ತೇವೆ. ಅವರು ಕೇಳುವ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸುತ್ತೇವೆ ಎಂದಿದ್ದಾರೆ.
ಭಾರತ್ ಜೋಡೋ ಯಾತ್ರೆ ಇರುವ ಕಾರಣ ಡಿಕೆ ಶಿವಕುಮಾರ್ ಇಡಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಸಮಯಾವಕಾಶಕ್ಕಾಗಿ ರಿಕ್ವೆಸ್ಟ್ ಕಳುಹಿಸಿದ್ದರು. ಆದರೆ ಇಡಿ ಅಧಿಕಾರಿಗಳು ಇಮೇಲ್ ನಲ್ಲಿ ಅದಕ್ಕೆ ಯಾವುದೇ ರೀತಿಯ ಉತ್ತರ ನೀಡಿಲ್ಲ. ನಾಳೆ ನೀವೂ ವಿಚಾರಣೆಗೆ ಹಾಜರಾಗಬೇಕು ಎಂಬುದನ್ನಷ್ಟೇ ತಿಳಿಸಿದ್ದಾರೆ. ಹೀಗಾಗಿ ವಿಚಾರಣೆಗೆ ಹಾಜರಾಗಲು ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ನಿರ್ಧರಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಡಿ ಕೆ ಶಿವಕುಮಾರ್, ಇಡಿ ನಾಳೆ ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವುದಕ್ಕೆ ಎರಡನೇ ಬಾರಿ ಸಮನ್ಸ್ ನೀಡಿದೆ. ನಮ್ಮ ಪಕ್ಷದ ಹಿರಿಯರ ಜೊತೆಗೆ ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ನಾವೂ ನಮ್ಮ ಪಕ್ಷದ ಕಾನೂನಿಗೆ ಗೌರವ ನೀಡಲೇಬೇಕು. ಹೀಗಾಗಿ ಕಾನೂನಿಗೆ ಅಗೌರವ ತೋರಿಸುವುದು ಸರಿಯಲ್ಲ. ನಾಳೆ ವಿಚಾರಣೆಗೆ ಹಾಜರಾಗುತ್ತೀವಿ. ಇಡಿ ಅಧಿಕಾರಿಗಳು ಕೇಳುವ ಎಲ್ಲಾ ಪ್ರಶ್ನೆಗಳು ಉತ್ತರಿಸುತ್ತೀವಿ ಎಂದಿದ್ದಾರೆ.