Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಮ್ಮ ಆಸೆ ಈಡೇರಿದರೆ ಹಾವು, ಚೇಳು, ಜರಿ, ಹಲ್ಲಿ ಕೊಡಬೇಕು : ಚಿತ್ರದುರ್ಗದಲ್ಲಿದ್ದಾನೆ ವಿಶೇಷ ರಂಗನಾಥ ಸ್ವಾಮಿ

Facebook
Twitter
Telegram
WhatsApp

ಚಿತ್ರದುರ್ಗ: ಮನುಷ್ಯ ತನ್ನೆಲ್ಲಾ ಕಷ್ಟಗಳನ್ನು ದೂರ ಮಾಡು ಎಂದು ಯಾವಾಗಲೂ ದೇವರ ಮೊರೆ ಹೋಗುತ್ತಾನೆ. ಹಾಗೇ ಇಷ್ಟಾರ್ಥಗಳನ್ನು ಪೂರೈಸಿದರೆ ಕಾಣಿಕೆಯನ್ನು ಅರ್ಪಿಸುತ್ತಾನೆ. ಕಾಣಿಕೆ ರೂಪದಲ್ಲಿ ಚಿನ್ನ, ಬೆಳ್ಳಿಯನ್ನು ಕೊಡಬಹುದು. ಇನ್ನು ಕೆಲವು ದೇವರಿಗೆ ದೇವಸ್ಥಾನದಲ್ಲಿ ಮರಿ ಬಲಿಯನ್ನು ನೀಡಬಹುದು. ಆದರೆ ಚಿತ್ರದುರ್ಗದ ರಂಗನಾಥನಿಗೆ ನೀಡುವ ಹರಕೆಯೇ ವಿಚಿತ್ರ.

ಬಯಲು ಸೀಮೆಯ ಪ್ರಮುಖ ಧಾರ್ಮಿಕ ಕೇಂದ್ರ ಹಾಗೂ ಬುಡಕಟ್ಟು ಕಾಡುಗೊಲ್ಲರ ಆರಾಧ್ಯ ದೈವ ಹಾರನಕಣಿವೆ ಶ್ರೀ ರಂಗನಾಥ ಸ್ವಾಮಿ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಹಾಗೂ ಹೊಸದುರ್ಗ ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಹಿನ್ನೀರಿನ ದಡದಲ್ಲಿರುವ (ಗಡಿಭಾಗದಲ್ಲಿ) ಶ್ರೀರಂಗನಾಥ ಸ್ವಾಮಿಯ ಅಂಬಿನೋತ್ಸವ ವರ್ಷಕ್ಕೊಮ್ಮೆ ಅದ್ಧೂರಿಯಾಗಿ ನೆರವೇರುತ್ತದೆ. ವಿಜಯದಶಮಿ ನಂತರದ ದಿನ ಈ ಜಾತ್ರೆ ವಿಜೃಂಭಣೆಯಿಂದ ಜರುಗುತ್ತದೆ.

ಜಿಲ್ಲೆಯ ಹೊಸದುರ್ಗ ತಾಲೂಕಿನ ಅಂಚಿಬಾರಿಹಟ್ಟಿ ಗ್ರಾಮದ ದೇವರ ಉತ್ಸವ ಮೂರ್ತಿಗೆ ಮೊದಲು ವಾಣಿ ವಿಲಾಸ ಜಲಾಶಯದ ಹಿನ್ನೀರಿನಲ್ಲಿ ಗಂಗಾ ಪೂಜೆ ನೆರವರಿಸಿ ನಂತರ ಅಂಚಿಬಾರಿಹಟ್ಟಿಯಿಂದ ಉತ್ಸವ ಮೂರ್ತಿಯನ್ನು ಬಣ್ಣದ ಪಟ್ಟದ ಕುದುರೆ ಹಾಗೂ ಪಲ್ಲಕ್ಕಿ ಮೇಲೆ ಕೂರಿಸಿ ಭಕ್ತಿ ಭಾವದಿಂದ ಮೆರವಣಿಗೆಯೊಂದಿಗೆ ಹಾರನಕಣಿವೆ ಶ್ರೀರಂಗನಾಥ ಶಿಲಾಮೂರ್ತಿ ಇರುವ ಜಾಗಕ್ಕೆ ಕರೆತಂದು ಸಂಪ್ರದಾಯದಂತೆ ಪೂಜಾರಿ ಪಟ್ಟದ ದೇವರಿಗೆ ಪೂಜೆ ಸಲ್ಲಿಸುತ್ತಾರೆ. ತದನಂತರ ಬನ್ನಿ ಮರದ ಹತ್ತಿರ ಬಾಳೆ ಕಂದು ನೆಟ್ಟು, ಪೂಜೆ ಸಲ್ಲಿಸಿ, ಬನ್ನಿ ಮರದ ಸುತ್ತ ಮೂರು ಬಾರಿ ಪ್ರದಕ್ಷಿಣೆ ಹಾಕಿ, ಬಾಳೆ ಕಂದಿಗೆ ಬಿಲ್ಲು ಬಾಣ ಹೊಡೆಯುವ ಮೂಲಕ ಅಂಬಿನೋತ್ಸವ ನೆರವೇರಿತು.

ಅಂಬಿನೋತ್ಸವ ಮುಗಿದ ದಿನವೇ ಉತ್ಸವ ಮೂರ್ತಿಯನ್ನು ಭಕ್ತಾದಿಗಳ ಸಮ್ಮುಖದೊಂದಿಗೆ ಹೊಸದುರ್ಗ ತಾಲೂಕಿನ ಅಂಚಿಬಾರಿಹಟ್ಟಿಗೆ ಹಿಂದಿರುಗಿಸಲಾಗುವುದು. ನಂತರ ಸಕ್ಕರೆ ಬಾಳೆ ಹಣ್ಣಿನ ನೈವೇದ್ಯದ ಹರಕೆ ಸಲ್ಲುತ್ತದೆ. ರೈತರು ತಾವು ಬೆಳೆದ ಬೆಳೆ ಫಲ ನೀಡಲಿ, ನಾಡಿನಲ್ಲಿ ಉತ್ತಮ ಮಳೆಯಾಗಲಿ ಹಾಗೂ ತಮ್ಮ ಆರೋಗ್ಯವನ್ನೂ ಸುಧಾರಿಸಲೆಂದು ಹರಕೆ ಹೊತ್ತಿರುತ್ತಾರೆ. ಅಂತಹ ಭಕ್ತರು ತಾವು ತಂದಿರುವ ಸಕ್ಕರೆ, ಬಾಳೆಹಣ್ಣನ್ನು ಹಸಿರು ಗಿಡ ಅಥವಾ ಟಂಗಟೆ ಗಿಡದ ಬುಡದಲ್ಲಿ ಪೂಜೆ ಮಾಡಿ, ಮೊದಲು ದಾಸಯ್ಯನಿಗೆ ನೀಡಿ, ಭಕ್ತಾದಿಗಳಿಗೆ ಹಂಚುತ್ತಾರೆ. ಇದಲ್ಲದೆ ಸಂತಾನ ಫಲ ಇಲ್ಲದವರೂ ತಮಗೆ ಸಂತಾನ ಫಲಿಸಲಿ ಎಂದು ಹರಕೆ ಮಾಡಿಕೊಳ್ಳುತ್ತಾರೆ.

ಯಾರಿಗಾದರೂ ಹಾವು, ಚೇಳು, ಜರಿ, ಹಲ್ಲಿ, ಇರುವೆ, ತಿಗಣೆ ಇತರೆ ವಿಷ ಜಂತುಗಳು ಕಡಿದಾಗ ಅಥವಾ ಕಣ್ಣಿಗೆ ಕಂಡಾಗ ಮೊದಲು ನೆನಪಿಸಿಕೊಳ್ಳುವುದೇ ಹಾರನಕಣಿವೆ ಶ್ರೀರಂಗನಾಥನನ್ನು. ಮನೆಗಳಲ್ಲಿ, ಹೊಲ- ಗದ್ದೆಗಳಲ್ಲಿ ಹಾವು, ಚೇಳು ಕಡಿದಾಗ ಅಥವಾ ಕಾಣಿಸಿಕೊಂಡಾಗ, ‘ಅಂಬಿನೋತ್ಸವದ ಜಾತ್ರೆಗೆ ಬಂದು ಹಾವು, ಚೇಳು, ಜರಿ ಕೊಟ್ಟು ಹರಕೆ ತೀರಿಸುತ್ತೇನೆ’ ಎಂದು ಜನರು ದೇವರಿಗೆ ಹರಕೆ ಮಾಡಿಕೊಳ್ಳುವ ಪದ್ಧತಿ ಭಕ್ತ ಸಮೂಹದಲ್ಲಿದೆ.

ತಾವು ಹರಕೆ ಹೊತ್ತಂತೆ ಜಾತ್ರೆಯಲ್ಲಿ ತಾಮ್ರ, ಬೆಳ್ಳಿಯ ಹಾವು, ಚೇಳು, ಹಲ್ಲಿ, ಜರಿ ಇತರೆ ವಿಷ ಜಂತುಗಳನ್ನು ಖರೀದಿಸಿ ದೇವರಿಗೆ ಅರ್ಪಿಸುತ್ತಾರೆ. ಒಂದು ಚೇಳು, ಹಾವಿನ ಪ್ರತಿಕೃತಿ 20 ರೂ.ನಂತೆ ಮಾರಾಟವಾಗುತ್ತದೆ. ದೇವಸ್ಥಾನ ವತಿಯಿಂದ ಟೆಂಡರ್ ಕರೆದು ಮಾರಾಟ ಮಾಡಲು ಅನುಮತಿ ನೀಡಿರುತ್ತಾರೆ. ಅಂಗಡಿಗಳು ಅನುಮತಿ ಪಡೆದು ಈ ಹರಕೆ ಪ್ರತಿಕೃತಿಗಳಿಗೆಂದೇ ಜಾತ್ರೆ ಸಮಯದಲ್ಲಿ ತೆರೆದುಕೊಂಡಿರುತ್ತವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!