ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಸರ್ಕಾರದಿಂದ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಶೇ.3.75ರಷ್ಟು ಹೆಚ್ಚಳ ಮಾಡಲಾಗಿತ್ತು. ಇದೀಗ ಸಿಎಂ ಬೊಮ್ಮಾಯಿಯವರು ಜುಲೈ 1, 2022ರಿಂದಲೇ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.3.75ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿ @BSBommai ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ.
— CM of Karnataka (@CMofKarnataka) October 7, 2022
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ ಎಂದು ತಿಳಿಸಿದ್ದಾರೆ.