Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ನೌಕರರಿಗೆ ತುಟ್ಟಿ ಬತ್ಯೆ ಹೆಚ್ಚಳ : ಜಿಲ್ಲಾ ನೌಕರರ ಪರವಾಗಿ ಮುಖ್ಯಮಂತ್ರಿಯವರಿಗೆ ಕೃತಜ್ಞತೆಗಳು…!

Facebook
Twitter
Telegram
WhatsApp

 

ಚಿತ್ರದುರ್ಗ, ಸುದ್ದಿಒನ್,  : ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ರವರು ಆಡಳಿತ ಯಂತ್ರದ ಪ್ರಮುಖ ಅಂಗವಾಗಿರುವ ಸರ್ಕಾರಿ ನೌಕರರ ತುಟ್ಟಿ ಬತ್ತೆಯನ್ನು  ಶೇ 3.75 ರಷ್ಟು ಹೆಚ್ಚಳ ಮಾಡಿ ರಾಜ್ಯದ 6.00ಲಕ್ಷ  ಸರ್ಕಾರಿ ನೌಕರರು 4.50ಲಕ್ಷ ಪಿಂಚಣಿದಾರರು,  3.00ಲಕ್ಷ ನಿಗಮ ಮಂಡಳಿ ನೌಕರರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಆರ್ಥಿಕ ಸೌಲಭ್ಯವನ್ನು ನೀಡುವ ಮೂಲಕ ಸರ್ಕಾರಿ ನೌಕರರ ಮತ್ತು ನೌಕರರ ಕುಟುಂಬದ ಸದಸ್ಯರ ಪ್ರೀತಿಗೆ ಪಾತ್ರರಾಗಿದ್ದಾರೆ.

ಅದೇ ರೀತಿ ನೌಕರರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ತುಟ್ಟಿಭತ್ಯೆ ಸೌಲಭ್ಯವನ್ನು ದೊರಕಿಸಿದ ಮುಖ್ಯಮಂತ್ರಿಳಿಗೆ, ಸರ್ಕಾರದ ಎಲ್ಲಾ ಸಚಿವರಿಗೆ, ಆದೇಶ ಮಾಡಲು ಸಹಕರಿಸಿದ ಎಲ್ಲಾ ಹಂತದ ಅಧಿಕಾರಿ ಮತ್ತು ನೌಕರರಿಗೆ ವಿಶೇಷವಾಗಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಕ್ಷರಿ ಅವರಿಗೆ ಹಾಗೂ ಕೇಂದ್ರ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಚಿತ್ರದುರ್ಗ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ಪರವಾಗಿ ಹೃದಯಪೂರ್ವಕ ಕೃತಜ್ಞತೆಯನ್ನು ಈ ಮೂಲಕ ಸಲ್ಲಿಸುತ್ತೇನೆ ಎಂದು ಚಿತ್ರದುರ್ಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೆ. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮೇಲೆ ಅಪಾರ ಗೌರವ ಪ್ರೀತಿ ಕಾಳಜಿ ಇರುವ ರಾಜ್ಯದ ಮುಖ್ಯಮಂತ್ರಿಗಳಾಗಿರುವ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿರವರಲ್ಲಿ ಜಿಲ್ಲೆಯ ಮತ್ತು ರಾಜ್ಯದ ಸಮಸ್ತ ಸರ್ಕಾರಿ ನೌಕರರ ಪರವಾಗಿ ತಮ್ಮಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ, ನೌಕರರ ಬಹುದಿನದ ಬೇಡಿಕೆಯಾದ 7ನೇ ವೇತನ ಆಯೋಗ ರಚನೆ ಮತ್ತು NPS ರದ್ದುಪಡಿಸಿ OPS ಜಾರಿಗೆ ಗೊಳಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರ ಹಾಗೂ ಅವರ ಕುಟುಂಬದವರ ಪಾಲಿಗೆ ಬೆಳಕಾಗಬೇಕೆಂದು ನೌಕರರ ಹಲವಾರು ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸರ್ಕಾರದ ಭಾಗವಾಗಿರುವ ನೌಕರರ ಪ್ರೀತಿಗೆ ಪಾತ್ರವಾಗಿರುವ, ಜನಪರ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುವ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸಬೇಕೆಂಬ ಪಣತೊಟ್ಟಿರುವ,  ತಮ್ಮಲ್ಲಿ ಎರಡು ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸಬೇಕಾಗಿ ಜಿಲ್ಲೆಯ ಮತ್ತು ರಾಜ್ಯದ ಸಮಸ್ತ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರ ಪರವಾಗಿ ಮನವಿ  ಮಾಡಿಕೊಳ್ಳುತ್ತೇನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!