Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ಹೆಸರನ್ನು ಹೇಳದೆ ಭಾಷಣ ಮಾಡಿ : ಬೊಮ್ಮಾಯಿ & ಬಿಎಸ್ವೈಗೆ ಎರಡು ಸವಾಲು ಹಾಕಿದ ಸಿದ್ದರಾಮಯ್ಯ..!

Facebook
Twitter
Telegram
WhatsApp

 

ಬೆಂಗಳೂರು: ಬಿಜೆಪಿ ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಸಂಕಲ್ಪ ಯಾತ್ರೆ ಶುರು ಮಾಡಿದೆ. ಈ ವೇಳೆ ಭಾಷಣ ಮಾಡುವಾಗೆಲ್ಲಾ ಕಾಂಗ್ರೆಸ್ ವಿರುದ್ಧ ಹರಿಹಾಯುತ್ತಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಈ ವಿಚಾರವಾಗಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಎರಡು ಚಾಲೆಂಜ್ ಹಾಕಿದ್ದಾರೆ.

ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ನನ್ನ ಎರಡೇ ಎರಡು ಸವಾಲು..
1. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ.
2. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಬಿಎಸ್ವೈ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಬಿಎಸ್ವೈ ಅವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು.

ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ ಬೊಮ್ಮಾಯಿ ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ #PayCM’’ ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ.

ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ ಬಿಎಸ್ವೈ ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ. ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ. ಪಾಪ, ಬಿಎಸ್ವೈ ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು

ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ಬಿಜೆಪಿ ಸರ್ಕಾರ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಸಾಲು ಸಾಲು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!