ಬೆಂಗಳೂರು: ಟ್ಯೂಷನ್ ಇದೆ ಎಂದು ಕರೆದು ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿ, ಕೊಲೆ ಮಾಡಿದ ಘಟನೆ ಮಂಗಳವಾರ ಮಳವಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಆರೋಪಿಗೆ ತಕ್ಕ ಶಿಕ್ಷೆಗೆ ಒತ್ತಾಯಿಸಿದ್ದಾರೆ.
ಮಳವಳ್ಳಿಯಲ್ಲಿ ಟ್ಯೂಶನ್ ಗೆ ಬಂದ 10 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ.
ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು.
ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.