ನವದೆಹಲಿ: ಸುಮಾರು 137 ವರ್ಷಗಳ ಇತಿಹಾಸದಲ್ಲಿ ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನಕ್ಕೆ 6 ಬಾರಿ ಅಷ್ಟೇ ಚುನಾವಣೆ ನಡೆದಿದೆ. ಇಂದು ಅಧ್ಯಕ್ಷೀಯ ಚುನಾವಣೆಗೆ ಅಖಾಡ ಸಿದ್ದವಾಗಿದ್ದು, ಶಶಿ ತರೂರ್ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆಗೆ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕುಟುಂಬದವರನ್ನು ಹೊರತುಪಡಿಸಿ ಬೇರೆಯವರಿಗೆ ಅವಕಾಶ ಕಲ್ಪಿಸಲಾಗಿದೆ.
ಇನ್ನು ಇಂದು ಚುನಾವಣೆ ನಡೆದರೆ ಅಕ್ಟೋಬರ್ 19ರಂದು ಫಲಿತಾಂಶ ಹೊರಬೀಳಲಿದೆ. 9 ಸಾವಿರಕ್ಕೂ ಹೆಚ್ಚು ಪಿಸಿಸಿ ಪ್ರತಿನಿಧಿಗಳು ಮತದಾನದಲ್ಲಿ ಭಾಗಿಯಾಗಲಿದ್ದಾರೆ. ರಹಸ್ಯ ಮತದಾನದ ಮೂಲಕ ಆಯ್ಕೆ ಮಾಡಲಾಗಿದೆ. ದೆಹಲಿಯಲ್ಲಿರುವ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಮತದಾನ ನಡೆಯಲಿದೆ.
ದೇಶದ 65ಕ್ಕೂ ಹೆಚ್ಚು ಕಡೆ ಮತಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 4ರ ತನಕ ಚಿಹ್ನೆಗಳ ಮೂಲಕ ಮತದಾನ ನಡೆಯಲಿದೆ. ಮತದಾನ ಮುಗಿದ ಬಳಿಕ ಸೀಲ್ಡ್ ಮಾಡಿದ ಬಾಕ್ಸ್ ಗಳು ದೆಹಲಿ ತಲುಪಲಿವೆ. ದೆಹಲಿಯಲ್ಲಿ ಸೀಲ್ಡ್ ಓಪನ್ ಮಾಡಿ ಮತ ಎಣಿಕೆ ಮಾಡಲಾಗುತ್ತದೆ. ಅಕ್ಟೋಬರ್ 19ಕ್ಕೆ ಫಲಿತಾಂಶ ಹೊರಬೀಳಲಿದೆ. ಹೈಕಮಾಂಡ್ ಮನಸ್ಸು ಮಲ್ಲಿಕಾರ್ಜುನ್ ಖರ್ಗೆ ಕಡೆಗೆ ಇದೆ.