ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ 12 ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ಸುಮಾರು 8 ಲಕ್ಷ ರೈತರಿಗೆ ಹಣ ಸಂದಾಯವಾಗಲಿದ್ದು, 16 ಸಾವಿರ ಕೋಟಿ ಹಣ ಬಿಡುಗಡೆಯಾಗಿದೆ.
ಕಾರ್ಯಕ್ರಮದ ಬಳಿಕ ರೈತರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ದೇಶದ ಮೂಲೆ ಮೂಲೆಯಿಂದಲೂ ಈ ಕಾರ್ಯಕ್ರಮದಲ್ಲಿ ರೈತರು ಭಾಗಿಯಾಗಿದ್ದಾರೆ. ರೈತರನ್ನು ಮತ್ತು ಕೃಷಿಯನ್ನು ಸಮೃದ್ದಗೊಳಿಸುವ ನಿಟ್ಟಿನಲ್ಲಿ ನಾವೂ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ. ಇಂದು ದೇಶದಲ್ಲಿ 600ಕ್ಕೂ ಹೆಚ್ಚು ಪಿಎಂ ಕಿಸಾನ್ ಸಮೃದ್ಧ ಕೇಂದ್ರಗಳು ಆರಂಭಗೊಂಡಿವೆ. ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಮಾದರಿ ಕೇಂದ್ರಗಳನ್ನಾಗಿ ರೂಪಿಸಲಾಗುತ್ತಿದೆ. ಇದು ಸಂಪೂರ್ಣವಾಗಿ ರೈತರ ಜೊತೆಗಿರಲಿದೆ.
ಇನ್ನು ದೀಪಾವಳಿ ಹಬ್ಬಕ್ಕೂ ಮುನ್ನ 8 ಲಕ್ಷ ರೈತರ ಖಾತೆಗಳಿಗೆ 16 ಸಾವಿರ ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಲಾಗಿದೆ. ಎಲ್ಲಾ ರೈತರಿಗೂ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಅವರು ರೈತರನ್ನುದ್ದೇಶಿಸಿ ಮಾತನಾಡಿದ್ದಾರೆ.